ಹೊಸದಿಲ್ಲಿ: ಇತ್ತೀಚೆಗೆ ಐಎಎಸ್, ಐಪಿಎಸ್ ಅಧಿಕಾರಿಗಳು ಅವಧಿ ಮುನ್ನವೇ ಸ್ವಯಂ ನಿವೃತ್ತಿ ಪಡೆದು ರಾಜಕಾರಣಕ್ಕೆ ಸೇರುತ್ತಿದ್ದಾರೆ.ಐಪಿಎಸ್ ವೃತ್ತಿಯಲ್ಲಿದ್ದಾಗ ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ತಮಿಳುನಾಡಿನಲ್ಲಿ ಭಾರತೀಯ ಜನತಾ ಪಾರ್ಟಿ ಸೇರಿದ್ದರು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಪ್ರಸ್ತುತ ಬಿಜೆಪಿ ಅಧ್ಯಕ್ಷರಾಗಿದ್ದಾರೆ.ಅಣ್ಣಾಮಲೈ ಬಳಿಕ ರಾಜ್ಯದ ಮತ್ತೊಬ್ಬ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಶೀಘ್ರದಲ್ಲೇ ಬಿಜೆಪಿ ಸೇರುವ ತಯಾರಿಯಲ್ಲಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.
ಹೌದು...ರಾಜ್ಯದಲ್ಲಿ ಸೂಪರ್ ಕಾಪ್ ಎಂದೇ ಪ್ರಸಿದ್ದರಾಗಿರುವ ಗದಗ ಮೂಲದ ರವಿ ಡಿ ಚನ್ನಣ್ಣನವರ್ ರಾಜಕೀಯ ವಲಯ ಸೇರಲಿದ್ದಾರೆ ಎಂಬ ಚರ್ಚೆ ದೆಹಲಿ ವಲಯದಲ್ಲಿ ಕೇಳಿಬರುತ್ತಿದೆ. ಅದಕ್ಕೆ ಕಾರಣ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್,ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರನ್ನು ಭೇಟಿ ಕಳೆದ ಮಂಗಳವಾರ ದೆಹಲಿಯಲ್ಲಿ ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಇನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮ್ಮುಖದಲ್ಲಿ ಸಭೆ ಕೂಡಾ ನಡೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ಬಿಜೆಪಿ ಸೇರುವ ಬಗ್ಗೆ ಪ್ರಾಥಮಿಕ ಮಾತುಕತೆಗಳು
ನಡೆಯುತ್ತಿದ್ದು ರವಿ ಡಿ ಚನ್ನಣ್ಣನವರ್ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಮುಂದಿನ ಚುನಾವಣೆಯಲ್ಲಿ ರವಿ ಡಿ ಚೆನ್ನಣ್ಣನವರ್ ಬಿಜೆಪಿ ಸೇರಿದ್ದೆ ಆದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ವರಿಷ್ಠ ಬಿಎಲ್ ಸಂತೋಷ್ ಉತ್ಸುಕರಾಗಿದ್ದಾರೆ ಎನ್ನಲಾಗಿದೆ.
ರವಿ ಚನ್ನಣ್ಣನವರ್ ಪ್ರೇರಣೆಯುಕ್ತ ಮಾತುಗಳಿಂದ ಹೆಚ್ಚು ಜನಪ್ರಿಯತೆ ಗಳಿಸಿದವರು. ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ಯುಟ್ಯೂಬ್, ವಾಟ್ಸ್ ಅಪ್ ನಲ್ಲಿ ಅತೀ ಹೆಚ್ಚು ಕ್ರೀಯಾಶೀಲರಾಗಿರುವ ಇವರು ಸಾಕಷ್ಟು ಯುವ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ















