ಕರ್ನಾಟಕ ಬಜೆಟ್ 2025 ಹೈಲೆಟ್ಸ್

Coastal Bulletin
ಕರ್ನಾಟಕ ಬಜೆಟ್ 2025 ಹೈಲೆಟ್ಸ್

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ಗಾತ್ರ 4,09,549 ಲಕ್ಷ ಕೋಟಿ ರೂ.ಗಳು. ವಿವಿಧ ವಲಯಗಳಿಗೆ ಬಂಪರ್ ಕೊಡುಗೆಗಳನ್ನು ಬಜೆಟ್‌ನಲ್ಲಿ ನೀಡಿದ್ದಾರೆ.

ಹೈಲೆಟ್ಸ್

2024-25ನೇ ಸಾಲಿಗೆ ತೆರಿಗೆಯೇತರ ರಾಜಸ್ವದಲ್ಲಿ ₹14,500 ಕೋಟಿ ಗಳು ಸಂಗ್ರಹವಾಗುವ ನಿರೀಕ್ಷೆ

• ತೆರಿಗೆಯೇತರ ರಾಜಸ್ವವು ವರ್ಷವಾರು ಶೇ10.5ರಷ್ಟು ಬೆಳವಣಿಗೆ ಸಾಧಿಸುವ ನಿರೀಕ್ಷೆ.

• ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು ₹8,000 ಕೋಟಿ

• ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ 'ಬಿ' ಮತ್ತು 'ಸಿ' ವೃಂದಗಳಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಪ್ರಕ್ರಿಯೆ

• ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು ₹428 ಕೋಟಿ ಅನುದಾನ

• 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ₹440 ಕೋಟಿ ಸಹಾಯಧನ

• ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು * 88 ಕೋಟಿ

• 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪನೆ

• 12,000 ಕೃಷಿ ಹೊಂಡಗಳ ಸ್ಥಾಪನೆ

• ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ

• ರೈತರ ಜೀವನೋಪಾಯವನ್ನು ಸುಧಾರಿಸಲು 'ಸಮಗ್ರ ಮಳೆಯಾಶ್ರಿತ ಕೃಷಿ ನೀತಿ'ಯನ್ನು ಅನುಷ್ಠಾನ

ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿನೆ.

• ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ನು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿ

• ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ₹25 ಕೋಟಿ

• ₹ 20 ಕೋಟಿ ಮೊತ್ತದಲ್ಲಿ 'ಸಾವಯವ ಮತ್ತು ಸಿರಿಧಾನ್ಯಗಳ ಹಬ್' ಅನ್ನು ಸ್ಥಾಪನೆ

• ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆತೋಟಗಾರಿಕೆ

• ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಗೆ ₹95 ಕೋಟಿ ಅನುದಾನ

• ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52,000 ಫಲಾನುಭವಿಗಳಿಗೆ ₹426 ಕೋಟಿ

• ಅಡಿಕೆಯ ಎಲೆ ಚುಕ್ಕೆ ರೋಗದ ಬಾಧೆ ನಿಯಂತ್ರಣ ಕ್ರಮಗಳಿಗೆ ₹62 ಕೋಟಿ

• ಮೈಸೂರಿನಲ್ಲಿ NABARD ಸಹಯೋಗದಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಾಪನೆ

• ರೇಷ್ಮೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ₹55 ಕೋಟಿ ರೂ. ಅನುದಾನ

• ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್‌ ನೆರವಿನೊಂದಿಗೆ ₹2,500 ಕೋಟಿ

ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭ

• ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದ್ದು, ಇದನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ₹ 100 ಕೋಟಿ ವೆಚ್ಚದ ಈ ಯೋಜನೆಯ ಶೇ 25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

• ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕ ಮಾಸಿಕ ಗೌರವಧನವನ್ನು ₹ 2,000 ಹೆಚ್ಚಳ

• ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಣ

• 5000 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ವಿಸ್ತರಣೆ ಇದಕ್ಕಾಗಿ ₹70 ಕೋಟಿ ವೆಚ್ಚ.

• 'ಕಲಿಕಾ ಚಿಲುಮೆ' ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.

• 'ಗಣಿತ ಗಣಕ' ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಣೆ

'ಓದು ಕರ್ನಾಟಕ' ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿ

ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ

ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ 'ಮರುಸಿಂಚನ' ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.

'ನಿರಂತರ' ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿ

ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು.

114. ರಾಜ್ಯದ 500 ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಂಪ್ಯೂಟ‌ರ್ ಮತ್ತು ವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ

ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ₹725 ಕೋಟಿ. ಹಾಗೂ ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ₹50 ಕೋಟಿ

Leave a Comment