ಉಡುಪಿ ವಿಡಿಯೋ ಪ್ರಕರಣ: ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ.

Coastal Bulletin
ಉಡುಪಿ ವಿಡಿಯೋ ಪ್ರಕರಣ: ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ.

ಉಡುಪಿ: ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿ ಆದೇಶ ಹೊರಡಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣ ಆಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿಗೆ ವಹಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಜುಲೈ 18ರಂದು

ಘಟನೆ ನಡೆದಿದ್ದು, ಘಟನೆ ಬೆಳಕಿಗೆ ಬಂದ ತಕ್ಷಣ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಚಾರ್ಯರು ಅಮಾನತು ಮಾಡಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ ಹಿನ್ನೆಲೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಜುಲೈ 26ರಂದು ಮೂವರು ವಿದ್ಯಾರ್ಥಿನಿಯರ ವಿರುದ್ಧ ಸುಮೊಟೋ ಪ್ರಕರಣವನ್ನು ದಾಖಲಿಸಿದ್ದರು.

Leave a Comment