ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಆಕಸ್ಮಿಕ ಬೆಂಕಿಗೆ ಪಟಾಕಿ ಅಂಗಡಿ ಹೊತ್ತಿ ಉರಿದಿದ್ದು, 30 ರಿಂದ40 ಜನ ಕಾರ್ಮಿಕರ ಪೈಕಿ 12 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಶನಿವಾರ ಘಟನೆ ನಡೆದಿದೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ
ಬೆಂಕಿ ನಂದಿಸಿದ್ದಾರೆ. ಸಾರ್ವಜನಿಕರನ್ನು ಪೊಲೀಸರು ದೂರ ಕಳುಹಿಸುತ್ತಿದ್ದು, ಸದ್ಯ ಪಟಾಕಿ ಮಳಿಗೆ ಬಳಿ ಮೂರು ಅಂಬುಲೆನ್ಸ್ ಗಳು ಆಗಮಿಸಿದ್ದು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗುತ್ತಿದೆ.















