Coastal Bulletin

ಬೆಂಗಳೂರು: ಬೆಂಗಳೂರಿನ 6 ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕ ಬೆದರಿಕೆಯ ಇ-ಮೇಲ್ ಸಂದೇಶ ಬಂದಿತ್ತು, ಸ್ಥಳಕ್ಕೆ ಪೋಲಿಸರು , ಬಾಂಬ್ ನಿಷ್ಕ್ರಿಯದಳ ಬಾಂಬ್ ನ್ನು ಪತ್ತೆಹಚ್ಚಲು ಶುರುಮಾಡಿದ್ದಾರೆ.

ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯ ಸರ್ಜಾಪುರ ರಸ್ತೆಯಲ್ಲಿರುವ ಡೆಲ್ಲಿ‌ ಪಬ್ಲಿಕ್ ಸ್ಕೂಲ್, ಮಹದೇವಪುರದ ಗೋಪಾಲನ್ ಇಂಟರ್ ನ್ಯಾಷನಲ್ ಸ್ಕೂಲ್, ಮಾರತ್ತಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್,  ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಸ್ಕೂಲ್, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್‌ ಸೇರಿ ಆರು ಶಾಲೆಗಳಿಗೆ  ಬಾಂಬ್ ಬೆದರಿಕೆ ಹಾಕಲಾಗಿದೆ.

ಖುದ್ದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಸೂಳಕುಂಟೆಯ

ಡೆಲ್ಲಿ ಪಬ್ಲಿಕ್ ಸ್ಕೂಲ್ ಸೇರಿದಂತೆ ನಾಲ್ಕು ಶಾಲೆಗಳನ್ನು ಗುರಿಯಾಗಿಟ್ಟುಕೊಂಡು ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇಮೇಲ್ ಬಂದಿದ್ದು, ಪೊಲೀಸರು ಕೂಲಂಕಷವಾಗಿ ತನಿಖೆ ಮಾಡುತ್ತಿದ್ದಾರೆ. ಇಮೇಲ್ ಆಧರಿಸಿ ಹೆಣ್ಣೂರು ಮತ್ತು ಹೆಬ್ಬುಗೋಡಿಯ ಖಾಸಗಿ ಶಾಲೆಗಳಿಗೆ ಬಾಂಬ್ ಸ್ಕ್ವಾಡ್, ಶ್ವಾನ ದಳ ಮೂಲಕ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಶಾಲೆಗಳಿಂದ ಸಿಬ್ಬಂದಿಗಳನ್ನು ಹೊರಗೆ ಕಳುಹಿಸಲಾಗಿದೆ ಎಂದು ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.

ಇದುವರೆಗೆ ಶಾಲೆಗಳಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಮಾಹಿತಿ, ಸುಳಿವು ಸಿಕ್ಕಿಲ್ಲ, ಹಾಗೆಂದು ಈ ವಿಷಯದಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ ಎಂದಿದ್ದಾರೆ.


Leave a Comment