ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ಮಧ್ಯಾಹ್ನ 1:30 ಗಂಟೆಯ ನಂತರ ಫಲಿತಾಂಶ ವೀಕ್ಷಿಸಬಹುದಾಗಿದೆ.
ಈ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಶೇಕಡಾ 93.90ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎರಡನೇ ಸ್ಥಾನ ದಕ್ಷಿಣ ಕನ್ನಡ ಜಿಲ್ಲೆ ಪಡೆದಿದೆ. ಇನ್ನು 48.45ರಷ್ಟು ಫಲಿತಾಂಶ ಪಡೆಯುವ ಮೂಲಕ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.
ವಿಭಾಗವಾರು ಫಲಿತಾಂಶ ನೋಡುವುದಾದರೆ, ಕಲಾ ವಿಭಾಗದಲ್ಲಿ 53.29 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 76.07 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಹಾಗೂ ವಿಜ್ಞಾನ ವಿಭಾಗದಲ್ಲಿ 82.54 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ
ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಾಲಕಿಯರು 77.88 ಶೇಕಡಾವಾರು ಉತ್ತೀರ್ಣ ಆಗಿದ್ದಾರೆ. ಹಾಗೂ ಬಾಲಕರು 68.20 ಶೇಕಡಾವಾರು ಉತ್ತೀರ್ಣರಾಗಿದ್ದಾರೆ.
*2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಬಳ್ಳಾರಿಯ ಸಂಜನಾ ಮೊದಲ ರ‍್ಯಾಂಕ್ ಪಡೆದಿದ್ದಾರೆ.
*ಕಲಾ ವಿಭಾಗದಲ್ಲಿ ಬಳ್ಳಾರಿಯ ನಿರ್ಮಲಾ ಎರಡನೇ ರ‍್ಯಾಂಕ್ ಪಡೆದಿದ್ದಾರೆ.
* ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ ಮೊದಲ ರ‍್ಯಾಂಕ್ ಪಡೆದಿದ್ದಾರೆ.
*ವಿಜ್ಞಾನ ವಿಭಾಗದಲ್ಲಿ ಎಕ್ಸ್‌ಪರ್ಟ್ ಪಿಯುಸಿ ಕಾಲೇಜು ಮಂಗಳೂರಿನ ಶ್ರೇಯಾ ಎಸ್ ಮೊದಲ ರ‍್ಯಾಂಕ್ ಪಡೆದಿದ್ದಾರೆ.














