ನಮ್ಮ ಮೆಟ್ರೋದಲ್ಲಿ ಮಹಿಳೆಯರಿಗೆ ಇಲ್ಲವೇ ರಕ್ಷಣೆ? ಮಹಿಳೆಗೆ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ, ಆರೋಪಿ ಲೋಕೇಶ್ ಆಚಾರ್ ಎಂಬಾತನ ಬಂಧನ.

Coastal Bulletin
ನಮ್ಮ ಮೆಟ್ರೋದಲ್ಲಿ ಮಹಿಳೆಯರಿಗೆ ಇಲ್ಲವೇ ರಕ್ಷಣೆ? ಮಹಿಳೆಗೆ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ, ಆರೋಪಿ ಲೋಕೇಶ್ ಆಚಾರ್ ಎಂಬಾತನ ಬಂಧನ.

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಭದ್ರತಾ ಅಧಿಕಾರಿಗಳು ಬಂಧಿಸಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಲೋಕೇಶ್ ಆಚಾರ್ ಬಂಧಿತ ಆರೋಪಿ.

ನಿನ್ನೆ ಬೆಳಗ್ಗೆ(ಡಿ.7) 9.40 ಕ್ಕೆ 22 ವರ್ಷದ ಮಹಿಳೆ ರಾಜಾಜಿನಗರ ಮೆಟ್ರೋ ನಿಲ್ದಾಣದಿಂದ ಪ್ರಯಾಣಿಸಿದ್ದಾರೆ. ಬೆಳಿಗ್ಗೆ ಪೀಕ್ ಅವರ್ ರಶ್ ಇದ್ದಿದ್ದರಿಂದ ಇದನ್ನೆ ಬಂಡವಾಳ ಮಾಡಿಕೊಂಡ ಕಾಮುಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆಕೆಯನ್ನ ಅಸಭ್ಯವಾಗಿ ಸ್ಪರ್ಶಿಸುವ ಮೂಲಕ ಕಿರುಕುಳ ನೀಡಿದ್ದಾನೆ.

ಯುವತಿ ಕೂಗಿಕೊಳ್ತಿದ್ದಂತೆ ಇದರಿಂದ ಗಾಬರಿಗೊಂಡು ಆರೋಪಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಕೆಂಪೇಗೌಡ  ಮೆಟ್ರೋ ನಿಲ್ದಾಣದಲ್ಲಿ ಇಳಿದು ಆರೋಪಿ ಎಸ್ಕಲೇಟರ್ ಬಳಸಿ ವೇಗವಾಗಿ ಮುಂದೆ ಹೋದಾಗ ಮಹಿಳಾ ಪ್ರಯಾಣಿಕರು ಹಿಡಿದುಕೊಳ್ಳುವಂತೆ ಕೂಗಿದ್ದಾರೆ. ಗಲಾಟೆ ಕೇಳಿಸಿಕೊಂಡ ಭದ್ರತಾ

ಅಧಿಕಾರಿ ಪುಟ್ಟಮಾದಯ್ಯ ಹಾಗೂ ದಿವಾಕರ್ ತಕ್ಷಣ ಸ್ಥಳಕ್ಕೆ ಆಗಮಿಸಿ ಲೋಕೇಶ್ ಆಚಾರ್ ನನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

30 ವರ್ಷ ವಯಸ್ಸಿನ ಲೋಕೇಶ್ ಆಚಾರ್ ನೆಲಮಂಗಲದ ನೇಕಾರರ ಕಾಲೋನಿ ನಿವಾಸಿಯಾಗಿದ್ದಾನೆ. ಈ ಹಿಂದೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಮಹಿಳೆಯೋರ್ವಳ ಮೊಬೈಲ್ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿ ಸಿಕ್ಕಿಬಿದ್ದಿದ್ದ ಆರೋಪಿ. ಈ ಪ್ರಕರಣಕ್ಕೆ ಸಂಬಂಧ ಏಪ್ರಿಲ್ 2023.ರಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಆರೋಪಿ. ಇದೀಗ ಮತ್ತೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಪೊಲೀಸರ ಅತಿಥಿಯಾಗಿದ್ದಾನೆ.

Leave a Comment