ಬೆಂಗಳೂರು: ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿಯ ನಾಮಫಲಕಕ್ಕೆ ಕಪ್ಪು ಮಸಿ ಬಳಿದು, ಆಕ್ರೋಶ ವ್ಯಕ್ತಪಡಿಸಿದರು. ಮಿಲ್ಲರ್ಸ್ ರಸ್ತೆಯಲ್ಲಿರುವ ನಿರ್ಮಲಾ ಸೀತಾರಾಮನ್ ಅವರ ಕಚೇರಿ ಬಳಿ ಜಮಾಯಿಸಿದ ಎನ್‌ಎಸ್‌ಯುಐ ಕಾರ್ಯಕರ್ತರು, ಘೋಷಣೆಗಳನ್ನು ಕೂಗಿದರು
ಈ ವೇಳೆ ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ಕೂಡಲೇ ಕಾರ್ಯಕರ್ತರನ್ನು ವಶಕ್ಕೆ ಪಡೆದರು, ಬಳಿಕ ಅವರನ್ನು ವಿಧಾನಸೌಧ ಪೊಲೀಸ್ ಠಾಣೆಗೆ ಕರೆದೊಯ್ದರು.ಕೇಂದ್ರ ಸರ್ಕಾರದಿಂದ
ಕರ್ನಾಟಕಕ್ಕೆ ಅನುದಾನ ಬಿಡುಗಡೆ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ಇದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಯಿತು ಎಂದು ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಅವರು ಹೇಳಿದರು.