ಹಾಸನ:ಅವಿವಾಹಿತ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ.

Coastal Bulletin
ಹಾಸನ:ಅವಿವಾಹಿತ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ.

ಹಾಸನ: ಹಾಸನದಲ್ಲಿ ಪದವಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವಿವಾಹಿತ ಉಪನ್ಯಾಸಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ.

ಆದರೆ, ದೀಪಾ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ದೀಪಾಗೆ 34 ವರ್ಷವಾಗಿದ್ದರೂ ಮದುವೆ ಮಾಡಿಕೊಂಡಿರಲಿಲ್ಲ. ಇದೇ ವಿಚಾರಕ್ಕೆ ಧುಡುಕಿನ ನಿರ್ಧಾರ ಕೈಗೊಂಡಿದ್ದಾರಾ ಎಂಬ ನಿಟ್ಟಿನಲ್ಲಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ತನಿಖೆ ನಂತರವೇ

ಮಾಹಿತಿ ತಿಳಿದುಬರಬೇಕಿದೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಬಂದು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆಸಿದೆ.

Leave a Comment