ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರದಿಂದ ಪ್ರತಿ ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ 50 ಸಾವಿರ ಉಚಿತ ನಿವೇಶನ ಹಂಚಲು ಸರ್ಕಾರ ಮುಂದಾಗಿದೆ.
ಈ ಸಂಬಂಧ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ (Cabinet Meet) ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ ಒಟ್ಟು 15 ಲಕ್ಷ ನಿವೇಶನ ಹಂಚಿಕೆಯ
ಗುರಿ ಹೊಂದಲಾಗಿದ್ದು, ಒಟ್ಟು 3 ಹಂತದಲ್ಲಿ ನಿವೇಶನಗಳನ್ನ ಹಂಚಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದ 5 ಲಕ್ಷ ನಿವೇಶನ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ.















