ಮೈಸೂರು ಅರಮನೆಯ ಗನ್ ಹೌಸ್ ವೃತ್ತದಲ್ಲಿ ರಾತ್ರೋರಾತ್ರಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯ ಪ್ರತಿಮೆ ಪ್ರತಿಷ್ಠಾಪನೆ- ಅರಸು ಸಮುದಾಯದಿಂದ ಪ್ರತಿಭಟನೆ.

Coastal Bulletin
ಮೈಸೂರು ಅರಮನೆಯ ಗನ್ ಹೌಸ್ ವೃತ್ತದಲ್ಲಿ ರಾತ್ರೋರಾತ್ರಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯ ಪ್ರತಿಮೆ ಪ್ರತಿಷ್ಠಾಪನೆ- ಅರಸು ಸಮುದಾಯದಿಂದ ಪ್ರತಿಭಟನೆ.

ಮೈಸೂರು: ಅರಮನೆ ಸುತ್ತ ಶುಕ್ರವಾರ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದ್ದು, ಗನ್‌ಹೌಸ್ ವೃತ್ತದಲ್ಲಿ ಲಿಂಗೈಕ್ಯ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆಯನ್ನು ರಾತ್ರೋರಾತ್ರಿ ಕಾನೂನು ಉಲ್ಲಂಘಿಸಿ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.

ಪಾರಂಪರಿಕ ಕಟ್ಟಡ ಸಮೀಪ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಇಲ್ಲವಾಗಿದ್ದು, ಇದೇ ಕಾರಣಕ್ಕೆ ಮಹಾನಗರ ಪಾಲಿಕೆ ಕೌನ್ಸಿಲ್‌ನಲ್ಲೂ ಗೊಂದಲ ಉಂಟಾಗಿತ್ತು. ಜಿಲ್ಲಾಡಳಿತ, ಸುತ್ತೂರು ಮಠದ ನಡುವೆ ಪತ್ರ ವ್ಯವಹಾರ ನಡೆದಿತ್ತು. ಇದೀಗ ಏಕಾಏಕಿ ಖಾಲಿ ತಳಹದಿ ಮೇಲೆ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ.

ಸಮುದಾಯದ ಮುಖಂಡರು ಕ್ರೇನ್ ಮೂಲಕ ಪ್ರತಿಮೆ ತಂದು ನಿಲ್ಲಿಸಿದ್ದಾರೆ.ಹಲವು ವರ್ಷಗಳಿಂದ ವಿವಾದವಾಗಿ

ಉಳಿದಿದ್ದ ಪ್ರತಿಮೆ ನಿರ್ಮಾಣ ವಿಚಾರ ಮುಂದಿನ ದಿನಗಳಲ್ಲಿ ವಿವಾದ ಆಗುವ ಸಾಧ್ಯತೆ ಇದೆ.

ಪ್ರತಿಮೆ ಪ್ರತಿಷ್ಠಾಪನೆ ವಿಚಾರವಾಗಿ ಕೆಲವರಿಂದ ವಿರೋಧ ವ್ಯಕ್ತವಾಗಿದ್ದು, ಅನಧಿಕೃತವಾಗಿ ಪ್ರತಿಮೆ ನಿಲ್ಲಿಸಿರುವುದರಿಂದ ಕೂಡಲೇ ತೆರವು ಮಾಡಬೇಕು ಎಂದು ಅರಸು ಸಮುದಾಯ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಪ್ರಕರಣವು ಹೈಕೋರ್ಟ್ ನಲ್ಲಿದ್ದು ಕೋರ್ಟ್ ಈ ವಿಚಾರವಾಗಿ ಒಂದು ಸಮಿತಿಯನ್ನು ಕೂಡ ರಚಿಸಿದೆ ಎಂದು ತಿಳಿದುಬಂದಿದೆ.

Leave a Comment