ರಾಜ್ಯದಲ್ಲಿ ಬಿಯರ್ ಸಿಗುತ್ತೆ ಆದರೆ ನೀರು ಸಿಗಲ್ಲ - ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯ. ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ವಿರುದ್ಧ ಸೋಮವಾರ ಬಿಜೆಪಿಯಿಂದ ಪ್ರತಿಭಟನೆ.

Coastal Bulletin
ರಾಜ್ಯದಲ್ಲಿ ಬಿಯರ್ ಸಿಗುತ್ತೆ ಆದರೆ ನೀರು ಸಿಗಲ್ಲ - ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯ. ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ವಿರುದ್ಧ ಸೋಮವಾರ ಬಿಜೆಪಿಯಿಂದ ಪ್ರತಿಭಟನೆ.

ಬೆಂಗಳೂರು: ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನರ ಪರದಾಡುತ್ತಿದ್ದಾರೆ. ಹೀಗಿದ್ದರೂ ಕಾಂಗ್ರೆಸ್‌ ಸರ್ಕಾರ ಕುಂಭಕರ್ಣನ ನಿದ್ರೆ ಮಾಡುತ್ತಿದೆ. ಸರ್ಕಾರದ ಆಡಳಿತ ವೈಫಲ್ಯ ವಿರುದ್ಧ ಕರ್ನಾಟಕ ಬಿಜೆಪಿಯು ಸೋಮವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ವಿಪಕ್ಷ ನಾಯಕ ಆರ್‌.ಅಶೋಕ್ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಎಲ್ಲಿ ನೋಡಿದರೂ ಎಣ್ಣೆ ಅಂಗಡಿಗಳು ತೆರೆದಿರುತ್ತವೆ. ಆದರೆ ಶುದ್ಧ ಕುಡಿಯುವ ನೀರಿನ ಘಟಕಗಳು ಮುಚ್ಚಿವೆ. ರಾಜ್ಯದಲ್ಲಿ ಬೀಯರ್‌ ಇದೆ, ನೀರಿಲ್ಲ ಎಂಬ ಸ್ಥಿತಿಯನ್ನು ಸರ್ಕಾರ ಸೃಷ್ಟಿಸಿದೆ ಎಂದರು.

ಬರಗಾಲದ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸದ ಸರ್ಕಾರದ ವಿರುದ್ಧ ಬಿಜೆಪಿ ಬೀದಿಗೆ ಇಳಿಯಲಿದೆ. ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಮಾನವನ್ನು ಸರ್ಕಾರ ಹರಾಜು ಹಾಕಲಾಗಿದೆ ಎಂದು ಅವರು ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದಲ್ಲಿ ಹಣ ಕೊರತೆ

ಇರುವುದರಿಂದಲೇ ಬರ ಘೋಷಣೆಗೆ ಮೀನ ಮೇಷ ಎಣಿಸಿದರು. ಜೊತೆಗೆ ಪರಿಹಾರ ನೀಡುವುದನ್ನು ಮುಂದೂಡಿದರು. ಹಳ್ಳಿಗಳಲ್ಲಿ ಜನರು ವಲಸೆ ಹೋಗುತ್ತಿದ್ದರೂ ಅದನ್ನು ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಇಂತಹ ಎಲ್ಲ ಸಮಸ್ಯೆಗಳನ್ನು ಮುಚ್ಚಿಡುವ ಕೆಲಸ ಸರ್ಕಾರ ಮಾಡುತ್ತಿದೆ.

ಬೆಂಗಳೂರಿನಲ್ಲಿ ಸೃಷ್ಟಿಯಾದ ಜಲಕ್ಷಾಮ, ಇಲ್ಲಿನ ಬೇಸಿಗೆಯ ಸ್ಥಿತಿಗತಿಯ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದ ಮಾಧ್ಯಮಗಳಲ್ಲೂ ಸುದ್ದಿಗಳು ಬರುತ್ತಿವೆ. ಇದರಿಂದ ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಮಾನ ಮರ್ಯಾದೆಯನ್ನು ಸರ್ಕಾರ ಹರಾಜು ಹಾಕಿದೆ. ಸರ್ಕಾರದ ಆಡಳಿತ ವೈಫಲ್ಯದಿಂದ ಇಷ್ಟೆಲ್ಲ ಆಗಿದ್ದು, ಅದರ ವಿರುದ್ಧ ನಾವು ಪ್ರತಿಭಟಿಸಲಿದ್ದೇವೆ ಎಂದು ಕಿಡಿ ಕಾರಿದರು.

Leave a Comment