Coastal Bulletin

ಬೆಂಗಳೂರು : ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಈಗಾಲೇ 9 ಗಂಟೆಯಿಂದ ಮತದಾನ ಶುರುವಾಗಿದೆ.

ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಂಜೆ 5-6 ರವರೆಗೆ ಮತ ಎಣಿಕೆ ನಡೆಯಲಿದ್ದು, ನಂತರ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯಸಭೆಯ ಒಟ್ಟು 4 ಸ್ಥಾನಗಳ ಪೈಕಿ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿದ್ದು, ನಾಲ್ಕನೇ ಸ್ಥಾನಕ್ಕಾಗಿ ಮೂರು ಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ನಡೆಸಿದ್ದು, ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದನ್ನು ಇಂದು

ಸಂಜೆಯವರೆಗೆ ಕಾಯಬೇಕಾಗಿದೆ.

ಬಿಜೆಪಿಗೆ ಎರಡು, ಕಾಂಗ್ರೆಸ್ ಗೆ ಒಂದು ಸ್ಥಾನ ಖಚಿತವಾಗಿದ್ದು, ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಹಾಗೂ ಕಾಂಗ್ರೆಸ್ ನ ಜೈರಾಂ ರಮೇಶ್ ಅವರ ಗೆಲುವು ಹೆಚ್ಚೂ ಕಡಿಮೆ ನಿರ್ಧಾರವಾಗಿದ್ದು, ನಾಲ್ಕನೇ ಸ್ಥಾನಕ್ಕಾಗಿ ಬಿಜೆಪಿಯಿಂದ ಲೆಹರ್ ಸಿಂಗ್ ಸಿರೋಯ, ಕಾಂಗ್ರೆಸ್ ನಿಂದ ಮನ್ಸೂರ್ ಖಾನ್ ಹಾಗೂ ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ.

Leave a Comment