Coastal Bulletin

ಮಂಡ್ಯ : ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೆನ್ನೆಗೆ ಬಾರಿಸಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ ದೊಡ್ಡಿಯಲ್ಲಿ ನಡೆದಿದೆ.

ಮಾಜಿ ಸಂಸದ ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದ ಸಂದರ್ಭದಲ್ಲಿ ಡಿಕೆಶಿ ಹಿಂಭಾಗದಲ್ಲಿ ಬರುತ್ತಿದ್ದ ಕಾರ್ಯಕರ್ತ ಉಮೇಶ್,ಡಿಕೆಶಿ ಹೆಗಲ ಮೇಲೆ ಕೈ ಹಾಕಿದ. ಇದರಿಂದ ಸಿಟ್ಟುಗೊಂಡ ಡಿ.ಕೆ.ಶಿವಕುಮಾರ್ ಕಾರ್ಯಕರ್ತನ ಕೆನ್ನೆ ಮೇಲೆ ಪಟಾರ್ ಅಂತ ಬಾರಿಸಿದ್ದಾರೆ. ಡಿಕೆಶಿ ಕೊಟ್ಟ ಏಟಿಗೆ ಕಾರ್ಯಕರ್ತ ತಬ್ಬಿಬ್ಬಾದ. ಡಿಕೆಶಿ ವರ್ತನೆಯಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದೆ.  ಕ್ಯಾಮರಾಗಳನ್ನು ಕಂಡ ಡಿಕೆಶಿ ಹೆಗಲ ಮೇಲೆ ಕೈ ಹಾಕ್ತಿಯಾ..? ಕಾಮನ್‌ಸೆನ್ಸ್ ಇಲ್ವಾ ಎಂದು ಡಿಕೆಶಿ ಗದರಿಸಿದ್ದಾರೆ.

style="width: 268px;">

 


ಡಿ.ಕೆ.ಶಿವಕುಮಾರ್ ಥಳಿಸಿದ್ದನ್ನು ಬಿಜೆಪಿ ಟೀಕಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಅಕ್ಷಮ್ಯ. ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿ.ಕೆ.ಶಿವಕುಮಾರ್ ಅವರಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಟ್ವಿಟ್ ಮಾಡಿದೆ.

Leave a Comment