ಬೆಂಗಳೂರು: ಸಿಲಿಕಾನ್ ಸಿಟಿ ಜನರ ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗಕ್ಕೆ (Yellow metro line) ಭಾನುವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಆರ್.ವಿ. ರೋಡ್ನಿಂದ ಬೊಮ್ಮಸಂದ್ರವರೆಗಿನ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿವೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್, ಶೋಭಾ ಕರಂದ್ಲಾಜೆ, ಸಂಸದರಾದ ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಸರ್ಕಾರದ ಸಿಎಸ್ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.
ವಿಶ್ವದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ಸ್ಥಾನ ಪಡೆದಿದೆ. ಬೆಂಗಳೂರನ್ನು ಭವಿಷ್ಯಕ್ಕೆ ಸಿದ್ಧಪಡಿಸಲು ಮೆಟ್ರೊ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಬೆಂಗಳೂರು ಈಗ ಅತಿ ಉದ್ದದ ಮೆಟ್ರೊ ಜಾಲಹೊಂದಿರುವ ದೇಶದ ಎರಡನೇ ನಗರವಾಗಿದೆ’ ಎಂದರು.
‘2014ರಲ್ಲಿ ದೇಶದ ಐದು ನಗರಗಳಲ್ಲಿ ಮಾತ್ರವೇ ಮೆಟ್ರೊ ರೈಲು ಮೂಸೌಕರ್ಯ
ಇತ್ತು. ಈಗ ದೇಶದ 20 ನಗರಗಳಲ್ಲಿ ಮೆಟ್ರೊ ಇದೆ. ದೇಶದಲ್ಲಿ 1,000 ಕಿ.ಮೀ.ಗೂ ಹೆಚ್ಚು ಉದ್ದದ ಮೆಟ್ರೊ ಜಾಲವಿದೆ. 951 ಕಿ.ಮೀ. ಉದ್ದದ ಮೆಟ್ರೊ ಕಾಮಗಾರಿ ನಿರ್ಮಾಣ ಹಂತದಲ್ಲಿದೆ’ಎಂದು ಮಾಹಿತಿ ನೀಡಿದರು.
ಈ ಹಂತದಲ್ಲಿ ಮೆಟ್ರೊ ಮೂರನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.














