ದರ್ಶನ್‌ಗೆ ಭಾರೀ ಹಿನ್ನಡೆ| ಪ್ರದೋಷ್‌ ಇನ್ನು ಮುಂದೆ ಮಾಫಿ ಸಾಕ್ಷಿ – ಕೋರ್ಟ್‌ ಒಪ್ಪಿಗೆ

Coastal Bulletin
ದರ್ಶನ್‌ಗೆ ಭಾರೀ ಹಿನ್ನಡೆ| ಪ್ರದೋಷ್‌ ಇನ್ನು ಮುಂದೆ ಮಾಫಿ ಸಾಕ್ಷಿ – ಕೋರ್ಟ್‌ ಒಪ್ಪಿಗೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ 14ನೇ ಆರೋಪಿ ಪ್ರದೋಷ್‌ನನ್ನು(Pradosh) ಮಾಫಿ ಸಾಕ್ಷಿಯಾಗಿ ಪರಿಗಣಿಸಲು 59ನೇ ಸಿಸಿಹೆಚ್‌ ನ್ಯಾಯಾಲಯ ಅನುಮತಿ ನೀಡಿದೆ.

ಇಂದು ಅರ್ಜಿಯನ್ನು ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ಪ್ರದೋಷ್ ಮಾಫಿ ಸಾಕ್ಷಿಗೆ ಇತರ ಆರೋಪಿಗಳು ಆಕ್ಷೇಪಿಸುವಂತಿಲ್ಲ ಎಂದು ಮಹತ್ವದ ಆದೇಶ ಪ್ರಕಟಿಸಿದೆ.

ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದ. ಈ ಅರ್ಜಿಯನ್ನು ಸ್ವೀಕರಿಸುವಂತೆ ಪ್ರಾಸಿಕ್ಯೂಷನ್ ಪರ ವಕೀಲರು ವಾದಿಸಿದ್ದರು. ಆದರೆ ದರ್ಶನ್ (Darashan) ಪರ ವಕೀಲ ಹಷ್ಮತ್ ಪಾಷಾ ಅವರು ಮಾಫಿ

ಅರ್ಜಿಯನ್ನು ಸ್ವೀಕರಿಸಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ನ್ಯಾಯಾಲಯವೇ ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿಯನ್ನು ಪುರಸ್ಕರಿಸಿದ್ದು ದರ್ಶನ್‌ಗೆ ಹಿನ್ನಡೆಯಾಗಿದೆ.

ಕೋರ್ಟ್ ಮಾಫಿ ಅರ್ಜಿಯನ್ನು ಸ್ವೀಕರಿಸಿ ಮುಂದಿನ ಪ್ರಕ್ರಿಯೆಗೆ ಅವಕಾಶ ನೀಡಲಿರುವುದರಿದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಹಾಗೂ ವಿಚಾರಣೆಯಲ್ಲಿ ಮುಂದೆ ಹೊಸ ಬೆಳವಣಿಗೆಗಳು ಎದುರಾಗಬಹುದು. ಇದು ದರ್ಶನ್ ಪರ ವಾದದ ಮೇಲೂ ಭಾರೀ ಪರಿಣಾಮ ಬೀರುವ ಸಾಧ್ಯತೆ ಇದೆ.

Leave a Comment