ಇಂದಿನಿಂದ ಪ್ಲಾಸ್ಟಿಕ್ ಬಳಕೆ ಮೇಲೆ ನಿಷೇಧ.

Coastal Bulletin
ಇಂದಿನಿಂದ ಪ್ಲಾಸ್ಟಿಕ್ ಬಳಕೆ ಮೇಲೆ ನಿಷೇಧ.

ಬೆಂಗಳೂರು: ಇಂದಿನಿಂದ ಭಾರತದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮೇಲೆ ನಿಷೇಧ ಹೇರಲಾಗಿದೆ. ಹೀಗಾಗಿ, ತರಕಾರಿ, ಹಾಲು, ಹಣ್ಣು ಮತ್ತಿತರ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅಂಗಡಿಗಳಲ್ಲಿ ನಿಮಗೆ ಪ್ಲಾಸ್ಟಿಕ್ ಕವರ್ ಸಿಗುವುದಿಲ್ಲ. ಭಾರತ ಸರ್ಕಾರವು ಇಂದಿನಿಂದ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಿದೆ.

ಕಸದ ಮತ್ತು ನಿರ್ವಹಣೆಯಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಉಂಟಾಗುವ ಮಾಲಿನ್ಯವನ್ನು ನಿಯಂತ್ರಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಏಕ-ಬಳಕೆಯ ಪ್ಲಾಸ್ಟಿಕ್ ನಿಷೇಧದ ಭಾಗವಾಗಿ, ಶಾಂಪೂ ಬಾಟಲಿಗಳು, ಪ್ಲೋಯ್ಥೀನ್ ಪ್ಲಾಸ್ಟಿಕ್ ಚೀಲಗಳು ಮತ್ತು ಬಿಸಾಡಬಹುದಾದ ಕಾಫಿ, ಟೀ ಕಪ್​ಗಳಂತಹ ವಸ್ತುಗಳನ್ನು ನಿಷೇಧಿಸಲಾಗಿದೆ.

ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿದ್ದು, ಕರ್ನಾಟಕ ಸರ್ಕಾರವು 2016ರಿಂದಲೇ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದೆ. ಇದೀಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹೊರಡಿಸಿದ ಈ ಆದೇಶವು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ  ಗಡಿ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಜಾರಿಗೊಳಿಸಲು ಇನ್ನಷ್ಟು ಸಹಾಯಕವಾಗಿದೆ.

ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸಿದರೆ ಅಥವಾ ಕಸದ ರೂಪದಲ್ಲಿ ಹಾಕಿದರೆ ವ್ಯಕ್ತಿಯ ಮತ್ತು ಮನೆಗಳಿಗೆ ಹಾಗೂ ಸಾಂಸ್ಥಿಕ ತ್ಯಾಜ್ಯ ಉತ್ಪಾದಕರಿಗೆ 500 ರೂ.ನಿಂದ 1 ಲಕ್ಷದವರೆಗೂ ದಂಡ, ಹಾಗೇ, 5 ವರ್ಷಗಳವರೆಗೆ ಜೈಲು ಶಿಕ್ಷೆ.

Leave a Comment