Coastal Bulletin

ಬೆಂಗಳೂರು: ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ "ನಮ್ಮ ನೀರು ನಮ್ಮ ಹಕ್ಕು" ಪಾದಯಾತ್ರೆಯಲ್ಲಿ ಭಾಗವಹಿಸಿದ ಇಬ್ಬರು ನಾಯಕರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕಾಂಗ್ರೆಸ್ ಹಿರಿಯ ನಾಯಕ ಹೆಚ್ಎಂ ರೇವಣ್ಣ ಹಾಗೂ ಸಿಎಂ ಇಬ್ರಾಹಿಂ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುವುದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಅದರ ಹೊರತಾಗಿಯೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಾದಯಾತ್ರೆ ನಡೆಸಿತು.

ಮೊದಲ ದಿನದ ರೀತಿಯಲ್ಲೇ ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿ ಎರಡನೇ

ದಿನ ಪಾದಯಾತ್ರೆ ಡಿ. ಕೆ. ಶಿವಕುಮಾರ್ ಹುಟ್ಟೂರು ದೊಡ್ಡಾಲಹಳ್ಳಿ ಪ್ರಾರಂಭವಾಯಿತು. ಸರ್ಕಾರಕ್ಕೆ ಸವಾಲು ಎಸೆದು ಪ್ರಾರಂಭವಾದ ಮೇಕೆದಾಟು ಪಾದಯಾತ್ರೆ ಸಂಗಮದಿಂದ ಪ್ರಾರಂಭವಾಗಿ 15 ಕಿ. ಮೀ. ಕ್ರಮಿಸಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹುಟ್ಟೂರು ದೊಡ್ಡಾಲಹಳ್ಳಿಗೆ ಸೋಮವಾರ ತಲುಪಿತ್ತು, ನಾಯಕರು ಅಲ್ಲಿಯೇ ವಾಸ್ತವ್ಯಹೂಡಿದ್ದರು.

Leave a Comment