Coastal Bulletin

ಬೆಂಗಳೂರು: 'ಅಸಾನಿ' ಚಂಡಮಾರುತದಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ವಿಶಾಖಪಟ್ಟಣ ಮತ್ತು ಒಡಿಶಾದ ಕರಾವಳಿಗೆ ಚಂಡಮಾರುತ ಧಾವಿಸಿದೆ. ಇದರಿಂದ ರಾಜ್ಯದ ಹಲವೆಡೆ ಇಂದಿನಿಂದ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ಹಾವೇರಿ, ಚಿತ್ರದುರ್ಗ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ರಾಜ್ಯಾದ್ಯಂತ ಇಂದು-ನಾಳೆ ಮಳೆಯಾಗುವ ಸಾಧ್ಯತೆ ಇದ್ದು ರಾಜ್ಯದ

ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಎರಡು ದಿನ ಗಾಳಿ ಸಹಿತ ಮಳೆ ಆಗಲಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡು ಬಿಟ್ಟು ಬೇರೆ ಎಲ್ಲ ಕಡೆಯೂ ಮಳೆಯಾಗಲಿದೆ. ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. 

Leave a Comment