ಬೆಂಗಳೂರು; ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿಯ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಬಿಜೆಪಿಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ನಿರ್ಮಲಾ ಸೀತಾರಾಮನ್ 46 ಮತ, ನಟ ಜಗ್ಗೇಶ್ 44 ಹಾಗೂ ಲೇಹರ್ ಸಿಂಗ್ 33 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ನಿಂದ ಕಣಕ್ಕೆ ಇಳಿದಿದ್ದಂತ ಮೊದಲ ಅಭ್ಯರ್ಥಿ ಜೈರಾಂ ರಮೇಶ್ 46 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಎರಡನೇ ಅಭ್ಯರ್ಥಿಯಾಗಿ
ಕಣಕ್ಕೆ ಇಳಿದಿದ್ದಂತ ಮನ್ಸೂರ್ ಆಲಿ ಖಾನ್ 25 ಮತ ಪಡೆದು ಸೋಲು ಕಂಡಿದ್ದಾರೆ.
ಜೆಡಿಎಸ್ ನಿಂದ ಕಣಕ್ಕೆ ಇಳಿದಿದ್ದಂತ ಕುಪೇಂದ್ರ ರೆಡ್ಡಿ 30 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ. ಈ ಮೂಲಕ ಬಿಜೆಪಿ ಮೂರು ಸ್ಥಾನ, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿ ಸೋತಿದ್ದಾರೆ.
















