Coastal Bulletin

ಹುಬ್ಬಳ್ಳಿ : ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಆಗಮಿಸಿರುವ ಪ್ರಧಾನಿ ಮೋದಿ ,ಭರ್ಜರಿ ರೋಡ್ ಶೋ ನಡೆಸಿದರು.

ಈ ವೇಳೆ ಭಾರಿ ಜನೋತ್ಸವ ಕಂಡುಬಂತು. ಗುರುವಾರ ಮಧ್ಯಾಹ್ನ ವಾಯುಸೇನೆ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿಯವರನ್ನು ಬಹಳ ಪ್ರೀತಿಯಿಂದ ಬರಮಾಡಿಕೊಂಡರು.

ವಿಮಾನ ನಿಲ್ದಾಣದಿಂದ ಕಾರ್ಯಕ್ರಮದೆಡೆಗೆ ಎಂಟು ಕಿ ಮೀ ದೂರವನ್ನು ಮೋದಿ ಅದ್ದೂರಿ ರೋಡ್ ಶೋ

ಮೂಲಕ ಕ್ರಮಿಸಿದರು.

ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಜನರು ಮೋದಿ ಮೋದಿ ಎಂದು ಘೋಷಣೆ ಮೂಲಕ ಸ್ವಾಗತ ಕೋರಿದರು.

ಮಾರ್ಗ ಮಧ್ಯದಲ್ಲಿ ಕಾರು ನಿಲ್ಲಿಸಿ ಮೋದಿ ಜನರತ್ತ ಕೈಬೀಸಿ ಧನ್ಯವಾದ ಸಲ್ಲಿಸಿದರು.

Leave a Comment