Coastal Bulletin

ಮೈಸೂರು : ಎನ್.ಆರ್.ಕ್ಷೇತ್ರದಲ್ಲಿ ಕಮಲ ಅರಳುವುದು ನಿಶ್ಚಿತ ಎಂದು ಬಿಜೆಪಿ ನರಸಿಂಹರಾಜ ಕ್ಷೇತ್ರದಲ್ಲಿ ಯುವ ಮೋರ್ಚಾ ಅಧ್ಯಕ್ಷ ಡಿ.ಲೋಹಿತ್ ವಿಶ್ವಾಸ ವ್ಯಕ್ತಪಡಿಸಿದರು.

ಕ್ಷೇತ್ರದ 39 ವಾರ್ಡ್ ವ್ಯಾಪ್ತಿಯ ಬೂತ್ ನಂ 144, 145,146,235 ಬೂತ್ ಅಧ್ಯಕ್ಷರ ಮನೆ ಮೇಲೆ ಪಕ್ಷದ ಧ್ವಜಹಾರಿಸಿದ ಬಳಿಕ ವಾಟ್ಸ್ಆ್ಯಪ್ ಗ್ರೂಪ್ ರಚಿಸಿ‌ ಮಾತನಾಡಿದರು.

ಕ್ಷೇತ್ರವನ್ನು ಅಭಿವೃದ್ಧಿಪಡಿಸುವಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಿಂದ  ಸಾಧ್ಯವಾಗಿಲ್ಲ. ಆದ್ದರಿಂದ ಈ ಬಾರಿ ಮತದಾರರು ಬಿಜೆಪಿಗೆ ಒಂದು ಅವಕಾಶವನ್ನು ಕಲ್ಪಿಸಿಕೊಡಲು ಮತದಾರರು ನಿಶ್ಚಯಿಸಿದ್ದಾರೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರ ನಾಯಕತ್ವವನ್ನು

ಭಾರತದಾದ್ಯಂತ ಮಾತ್ರವಲ್ಲದೆ ಇಡೀ ವಿಶ್ವದಾದ್ಯಂತ ಒಪ್ಪಿಕೊಳ್ಳಲಾಗಿದೆ. ಯಡಿಯೂರಪ್ಪನವರು ಹಾಗೂ ಬಸವರಾಜ್ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಹಲವಾರು ಜನಪರ ಕಾರ್ಯಕ್ರಮಗಳನ್ನು ನೀಡಲಾಗಿದೆ.

ಕ್ಷೇತ್ರದಲ್ಲಿ ಯುವ ಮತದಾರರು ಬಿಜೆಪಿಯನ್ನು ಬೆಂಬಲಿಸಲು ಮುಂದೆ ಬರುತ್ತಿರುವುದು ಸಂತಸದ ವಿಷಯ. ಮುಂದಿನ ಚುನಾವಣೆಯಲ್ಲಿ ಎನ್.ಆರ್ನಲ್ಲಿ. ಕಮಲ ಅರಳುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗದ  ಪ್ರಧಾನ ‌ಕಾರ್ಯದರ್ಶಿ ಮನಿರತ್ನಮ್, ಮುಖಂಡರಾದ ಸುಬ್ರಮಣ್ಯ, ಶ್ರೀನಿವಾಸ್ ಇತರರಿದ್ದರು.

Leave a Comment