ಸಂವಿಧಾನವನ್ನು ಬದಲಾಯಿಸಲು ಯತ್ನಿಸಿದರೆ ರಕ್ತಪಾತ ನಡೆಯಲಿದೆ, ಸಂವಿಧಾನ ಬದಲಾಯಿಸುವ ಹೇಳಿಕೆ ನೀಡಿದ ಬಿಜೆಪಿ ಸಂಸದನಿಗೆ ಸಿಎಂ ಎಚ್ಚರಿಕೆ.

Coastal Bulletin
ಸಂವಿಧಾನವನ್ನು ಬದಲಾಯಿಸಲು ಯತ್ನಿಸಿದರೆ ರಕ್ತಪಾತ ನಡೆಯಲಿದೆ, ಸಂವಿಧಾನ ಬದಲಾಯಿಸುವ ಹೇಳಿಕೆ ನೀಡಿದ ಬಿಜೆಪಿ ಸಂಸದನಿಗೆ ಸಿಎಂ ಎಚ್ಚರಿಕೆ.

ಬೆಂಗಳೂರು: ಸಂವಿಧಾನ (Constitution of India) ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಅನಂತ್ ಕುಮಾರ್ ಹೆಗಡೆಯವರ (Anantkumar Hegde) ಸಂವಿಧಾನ ತಿದ್ದುಪಡಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಹೇಳಿಕೆ ಮೊದಲ ಬಾರಿಯಲ್ಲ. ಈ ಹಿಂದೆ ಮಂತ್ರಿಯಾಗಿದ್ದಾಗಲೂ ಇದನ್ನೇ ಹೇಳಿದ್ದರು. ಮೋದಿ ಪ್ರಧಾನಿಯಾಗಿದ್ದಾಗಲೇ ಅವರು ಹೇಳಿದ್ದರು. ಮೋದಿಯವರು ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಿಲ್ಲ. ಇದು ಬಿಜೆಪಿಯವರ ಹಿಡನ್ ಅಜೆಂಡಾ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನ ಬದಲಾವಣೆ ಮಾಡಬೇಕು ಎನ್ನುವುದು ಬಿಜೆಪಿಗರ ಹಿಡನ್ ಅಜೆಂಡಾ. ಸಂವಿಧಾನಕ್ಕೆ ಅನಗತ್ಯ ವಿಚಾರಗಳನ್ನ ಸೇರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಸಂವಿಧಾನ ಬದಲಾವಣೆ ಮಾಡಬೇಕು, ಇದಕ್ಕಾಗಿ 2/3 ಬಹುಮತ ಬೇಕು ಎಂದಿದ್ದಾರೆ. ದೇಶ ಉದ್ದಾರಕ್ಕೆ, ಬಡವರ ಉದ್ದಾರಕ್ಕೆ ಅಲ್ಲ. ಸಂವಿಧಾನ ಬದಲಾವಣೆಗಾಗಿ 2/3 ಬಹುಮತ ಕೇಳುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.

ಮನುವಾದವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ

ಅನುಗುಣವಾಗಿ ಸಂವಿಧಾನ ಇರಬೇಕು ಎನ್ನುವುದು ಇವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರು ಎಲ್ಲರೂ ಇದನ್ನ ವಿರೋಧ ಮಾಡ್ತಾರೆ. ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ಹೆಗಡೆ ಮೂಲಕ ಇದನ್ನು ಹೇಳಿಸುತ್ತಿದ್ದಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸವಾದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

Leave a Comment