ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್ 189 ಅಭ್ಯರ್ಥಿಗಳ ಟಿಕೆಟ್ ಬಿಡುಗಡೆ ಮಾಡಿದ್ದು, ಇಂದು( ಬುಧವಾರ) ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇದರಲ್ಲಿ 23 ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.
ಎರಡನೇ ಪಟ್ಟಿಯಲ್ಲಿ 7 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಒಟ್ಟು 23 ಮಂದಿಗೆ ಟಿಕೆಟ್ ಘೋಷಿಸಲಾಗಿದೆ. ಎರಡನೇ ಪಟ್ಟಿಯಲ್ಲೂ ಮೈಸೂರಿನ ಕೆಆರ್ ಕ್ಷೇತ್ರದ ಟಿಕೆಟ್ ಘೋಷಣೆಯಾಗಿಲ್ಲ. ಇದು ಹಾಲಿ ಶಾಸಕ ಎಸ್ಎ ರಾಮದಾಸ್
ಪ್ರತಿನಿಧಿಸುವ ಕ್ಷೇತ್ರವಾಗಿದೆ. ರಾಮದಾಸ್ಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರು ಬುಧವಾರ ವಿಷ ಸೇವಿಸುವ ಯತ್ನವನ್ನೂ ಮಾಡಿದ್ದರು. ಎರಡನೇ ಪಟ್ಟಿಯಲ್ಲೂ ಜಗದೀಶ್ ಶೆಟ್ಟರ್ ಹೆಸರು ಕಂಡುಬಂದಿಲ್ಲ. ಬುಧವಾರವಷ್ಟೇ ಅವರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸಿ ಬಂದಿದ್ದರು.














