ಬೆಂಗಳೂರು : ಮೇ 15ರ ವೇಳೆಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ಮೌಲ್ಯಮಾಪನದಲ್ಲಿ ಸಣ್ಣಪುಟ್ಟದೋಷ ಸರಿಪಡಿಸುವುದು ಸೇರಿದಂತೆ ವಿವಿಧ ಕಾರಣಗಳಿಂದ ಮೂರ್ನಾಲ್ಕು ದಿನ ತಡವಾಗಲಿದ್ದು, ಮೇ 19ಕ್ಕೆ ಪ್ರಕಟವಾಗುವ ಸಾಧ್ಯತೆ ಇದೆ.
ಮೌಲ್ಯಮಾಪನ ಕಾರ್ಯ ನಿರೀಕ್ಷೆಗಿಂತ ತಡವಾಗಿ ಪೂರ್ಣಗೊಂಡಿದೆ. ಬಳಿಕ ಮೌಲ್ಯಮಾಪನದಲ್ಲಿ ಸಣ್ಣ ಪುಟ್ಟ ದೋಷಗಳು, ಕಣ್ತಪ್ಪುಗಳಿದ್ದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯ ನಡೆಸಲಾಗುತ್ತಿದೆ.
ಇದಾದ ನಂತರ ಅಂಕಗಳ ದಾಖಲೀಕರಣ ಸೇರಿದಂತೆ ಫಲಿತಾಂಶ
ಪ್ರಕಟಿಸಲು ಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಇದಕ್ಕೆ ಇನ್ನೂ ಒಂದು ವಾರ ಸಮಯಾವಕಾಶ ಬೇಕಾಗುತ್ತದೆ. ಹಾಗಾಗಿ ಮೇ 19ರ ಹೊತ್ತಿಗೆ ಫಲಿತಾಂಶ ನೀಡಲು ಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.














