ಬೆಂಗಳೂರು: ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಗರಂ ಆದ ಮಾಜಿ ಸಂಸದೆ, ನಟಿ ರಮ್ಯಾ, ಸಾಲು ಸಾಲು ಟ್ವೀಟ್ ಗಳನ್ನು ಮಾಡುತ್ತಿದ್ದು ಮಾತ್ರವಲ್ಲದೇ, ಕಾಂಗ್ರೆಸ್ ಕಚೇರಿಯೇ ನನ್ನ ಟ್ರೋಲ್ ಮಾಡಲು ಹೇಳಿದೆ ಎಂದು ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಉಸ್ತುವಾರಿ ಜವಾಬ್ದಾರಿ ಬಿಟ್ಟ ಬಳಿಕ ನನ್ನ ವಿರುದ್ಧ 8 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ. ನನ್ನ ಇಮೇಜ್ ಡ್ಯಾಮೇಜ್ ಮಾಡಲೆಂದೇ ನನ್ನ ವಿರುದ್ಧ ಸುದ್ದಿ ಮಾಡಲಾಗುತ್ತಿದೆ. ನಾನು 8 ಕೋಟಿ ರೂಪಾಯಿ ವಂಚನೆ ಮಾಡಿಲ್ಲ, ಎಲ್ಲಿಯೂ ಓಡಿ ಹೋಗಿಲ್ಲ. ವೈಯಕ್ತಿಕ ಕಾರಣಕ್ಕೆ
ರಾಜೀನಾಮೆ ನೀಡಿದ್ದೇನೆ. ನಾನು ಮೌನವಾಗಿದ್ದಿದ್ದೇ ತಪ್ಪಾಗಿದೆ. ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸ್ಪಷ್ಟನೆ ನೀಡಲಿ ಎಂದು ಹೇಳಿದ್ದಾರೆ.
ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್ ಗಾಂಧಿ. ನನಗೆ ಅವಕಾಶ ನೀಡಲಾಗಿದೆ ಎಂದು ಯಾರಾದರೂ ಹೇಳಿದರೆ ಅವರು ಅವಕಾಶವಾದಿಗಳು. ಜೀವನದುದ್ದಕ್ಕೂ ಟ್ರೋಲ್, ನಿಂದನೆಗಳಿಗೆ ಒಳಗಾಗಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.














