ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಆದೇಶ: ಶುಲ್ಕ ಪಾವತಿಸಿದವರಿಗೆ 15 ದಿನಗಳಲ್ಲಿ ಮರುಪಾವತಿ

Coastal Bulletin
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಆದೇಶ: ಶುಲ್ಕ ಪಾವತಿಸಿದವರಿಗೆ 15 ದಿನಗಳಲ್ಲಿ ಮರುಪಾವತಿ

ಬೆಂಗಳೂರು: ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ಗಳನ್ನು ವಿತರಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶಿಸಲಾಗಿದೆ.

ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ಗಳನ್ನು ವಿತರಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದನೆ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮ / ಸಂಸ್ಥೆಗಳು, ವಿದ್ಯಾರ್ಥಿ ಬಸ್ ಪಾಸ್ ವಿತರಣೆಯಲ್ಲಿ ಹಾಲಿ ಅನುಸರಿಸುತ್ತಿರುವ ನಿಯಮಾವಳಿಗಳನ್ನು (ವಿದ್ಯಾರ್ಥಿ ಪಾಸಿಗಾಗಿ ಶೈಕ್ಷಣಿಕ ವಿದ್ಯಾಭ್ಯಾಸದ ಅರ್ಹತಾ ಮಾನದಂಡಗಳು, ದೂರದ ಮಿತಿ, ಪಾಸಿನ ಕಾಲಾವಧಿ

ಇತ್ಯಾದಿ) ಅನುಸರಿಸಬೇಕು ಎಂದು ಸೂಚನೆ ನೀಡಿದೆ.

ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಶಾಲೆಗಳು ಸೇರಿದಂತೆ ಎಲ್ಲಿಂದಲಾದರೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ವಿತರಿಸಲಾಗಿರುವ ಪಾಸ್‌ಗಳು ಯಥಾವತ್ತಾಗಿ ಬಸ್ ಚಾಲ್ತಿಯಲ್ಲಿರುತ್ತವೆ. ಆದಾಗ್ಯೂ ವಿದ್ಯಾರ್ಥಿಗಳು ಪಾವತಿಸಿರುವ ಮೊತ್ತವನ್ನು ಹಿಂತಿರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

15 ದಿನದೊಳಗೆ ಮರು ಪಾವತಿ: ರಾಜ್ಯದಲ್ಲಿ ವಾಸವಿದ್ದು, ಗಡಿರಾಜ್ಯಗಳಲ್ಲಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಗಡಿರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸಲಾಗುವುದು. ಉಚಿತ ಬಸ್ ಪಾಸ್ ಯೋಜನೆ ಜಾರಿಯಾಗುವುದರಿಂದ ಶುಲ್ಕ ಪಡೆದು ವಿತರಿಸಲಾದ ಪಾಸುಗಳ ಸಂಪೂರ್ಣ ಶುಲ್ಕವನ್ನು 15 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿಸಲು ಆದೇಶಿಸಲಾಗಿದೆ.

Leave a Comment