ಮೈಸೂರು : ಪ್ರವೀಣ್ ಹತ್ಯೆ ಖಂಡಿಸಿ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ರಾಜೀನಾಮೆ ಪತ್ರ ನೀಡಿದ್ದ ಬಿಜೆಪಿ ಪಕ್ಷದ ಹಲವು ನಿಷ್ಠಾವಂತ ಕಾರ್ಯಕರ್ತರು ಇಂದು ಆರೋಪಿಗಳನ್ನು ಬಂಧಿಸಿರುವುದನ್ನು ಖಚಿತಪಡಿಸಿಕೊಂಡು ಎಲ್ಲಾ ಪದಾಧಿಕಾರಿಗಳ ಸಹಿತ ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಸೋಮಸುಂದರ್ ಹಾಗೂ ಮೈಸೂರು ನಗರ ಯುವಮೋರ್ಚಾ ಅಧ್ಯಕ್ಷ ಕಿರಣ್ ಗೌಡ ರವರು ಕಾರ್ಯಕರ್ತರ ಜೊತೆ ಮಾತನಾಡಿ ಮನವೊಲಿಸುವಲ್ಲಿ ಸಫಲರಾಗಿದ್ದಾರೆ. ಪಕ್ಷದ ಎಲ್ಲಾ ಕಾರ್ಯ ಚಟುವಟಿಕೆಯಲ್ಲಿ ಭಾಗಿಯಾಗುವಂತೆ ಕೋರಿ ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯಲ್ಲಿ ತೊಡಗುವಂತೆ ಮನವಿ ಮಾಡಿದರು.
















