Coastal Bulletin

ಬೆಂಗಳೂರು:ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 3 ರೂ. ಹೆಚ್ಚಿಸಲು ಕೆಎಂಎಫ್‌ ನಿರ್ಧರಿಸಿದೆ.

ಕೆಎಂಎಫ್‌ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸಲು ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ದರ ಏರಿಕೆಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ಕೆಎಂಎಫ್‌ನ ಉನ್ನತ ಮೂಲಗಳು ತಿಳಿಸಿವೆ.

ಕೆಎಂಎಫ್‌ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರು.

ಈ ಹಿಂದೆಯೇ ದರ ಏರಿಕೆಗೆ ನಿರ್ಧರಿಸಲಾಗಿತ್ತು. ಹಾಲು ಮಾರಾಟ ದರವನ್ನು ಲೀಟರ್‌ಗೆ 3 ರೂ. ಹೆಚ್ಚಿಸುವ ಮನವಿಗೆ

ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರಾಜ್ಯ ಹಾಲು ಮಹಾಮಂಡಳದ (ಕೆಎಂಎಫ್‌) ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್‌ ಸಭೆಯ ನಂತರ ಪ್ರತಿಕ್ರಿಯಿಸಿದ್ದರು.

ರಾಜ್ಯದಲ್ಲಿ ಸದ್ಯ ನಂದಿನಿ ಹಾಲಿನ ಮಾರಾಟ ದರ ಲೀಟರ್‌ಗೆ 37ರೂ. ಇದೆ. ಬೇರೆ ಬ್ರ್ಯಾಂಡ್‌ಗಳ ಹಾಲಿನ ಬೆಲೆ ಲೀಟರ್‌ಗೆ 40 ರೂ.ನಿಂದ 51 ರೂ.ವರೆಗೆ ಇದೆ. ಈ ವಿಚಾರವಾಗಿ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಾಲಿನ ದರವನ್ನು 40 ರೂ.ಗೆ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿಸಿದ್ದರು.

Leave a Comment