ಮೈಸೂರು: ಭಾರತ (India) ಎಂದಿಗೂ ಹಿಂದೂ ರಾಷ್ಟ್ರ (Hindu Nation) ಆಗಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ನಮ್ಮದು ಬಹುತ್ವದ ರಾಷ್ಟ್ರ. ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ ದೇಶ. ಆರ್‌ಎಸ್‌ಎಸ್ ಸಂಘಪರಿವಾರ ಬಹಳ ದಿನದಿಂದ ಹಿಂದೂ ರಾಷ್ಟ್ರದ ಬಗ್ಗೆ ಹೇಳುತ್ತಿದೆ. ಆದರೆ ಇದು ಎಂದಿಗೂ ಆಗುವುದಿಲ್ಲ ಎಂದು ಹೇಳಿದರು.
ಇನ್ನು ಜಿ.ಟಿ.ದೇವೇಗೌಡರನ್ನು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ
ಸ್ಥಾನದಿಂದ ಕೈ ಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ಪಕ್ಷಕ್ಕೆ ಸೇರಿದ್ದು, ನಾನು ಯಾರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕರೆಯುವುದಿಲ್ಲ. ಬಂದರೆ ಯಾಕೆ ಬಂದ್ರಿ ಎಂದು ಕೇಳುವುದಿಲ್ಲ. ಅದು ಅವರವರಿಗೆ ಬಿಟ್ಟದ್ದು. ನಾನು ಜಿ.ಟಿ ದೇವೇಗೌಡ ಒಂದೇ ಕ್ಷೇತ್ರದವರು. ಹೀಗಾಗಿ ಸ್ನೇಹ ಇದೇ ಅಷ್ಟೇ ಎಂದರು.















