ಬಂಗಾಳಕೊಲ್ಲಿಯಲ್ಲಿ ಮತ್ತೆ ಚಂಡಮಾರುತ : ರಾಜ್ಯದ ಈ 10 ಜಿಲ್ಲೆಗಳಲ್ಲಿ ಮಳೆ

Coastal Bulletin
ಬಂಗಾಳಕೊಲ್ಲಿಯಲ್ಲಿ ಮತ್ತೆ ಚಂಡಮಾರುತ : ರಾಜ್ಯದ ಈ 10 ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯದಲ್ಲಿಯೂ ಫೆಂಗಲ್‌ ಚಂಡಮಾರುತದ ಪರಿಣಾಯದಿಂದಾಗಿ ಜನತೆ ಸಂಕಷ್ಟಕ್ಕೆ ಸಿಲುಕಿದ್ದರು. ಒಂದೇ ಒಂದು ಚಂಡಮಾರುತದಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಹಲವರು ಅವಂತರ ಸೃಷ್ಟಿಯಾಗಿತ್ತು. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಬೀಸಲಿದ್ದು,ಜನಯ ಭಯ ಬೀತರಾಗಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಬೀಸಲಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ನಾಳೆ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ

ವಾತಾವರಣವಿರಲಿದೆ ಕೆಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಕೋಲಾರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದು ಮತ್ತು ನಾಳೆ ಬೆಂಗಳೂರು ನಗರ, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ ಹಾಗೂ ಚಾಮರಾಜನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಕೋಲಾರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ.

Leave a Comment