ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯಲ್ಲಿ ಇತ್ತೀಚೆಗಷ್ಟೇ ಪ್ರಾರಂಭವಾದ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿಶೋ ಕಾರ್ಯಕ್ರಮ ಸ್ಪರ್ಧಿ 6 ವರ್ಷದ ಸಮನ್ವಿ ಇಂದು (ಜನವರಿ 13) ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾಳೆ.
ಇದು ಅವಳ ಅಭಿಮಾನಿಗಳಿಗೆ ದುಃಖ ತಂದಿದೆ. ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳು ಸಮನ್ವಿ. ತಾಯಿ ಅಮೃತಾ ಜತೆ ಅವರು ಈ ರಿಯಾಲಿಟಿಶೋಗೆ ಬಂದಿದ್ದರು. ಇಂದು ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ಮೇಲೆ ಸಮನ್ವಿ ಹಾಗೂ ಅಮೃತಾ ತೆರಳುತ್ತಿದ್ದರು.
ಈ ವೇಳೆ ಸ್ಕೂಟರ್ಗೆ ಹಿಂದಿನಿಂದ ಲಾರಿ ಬಂದು ಹೊಡೆದಿದೆ. ಸ್ಥಳದಲ್ಲೇ ಸಮನ್ವಿ ಮೃತಪಟ್ಟಿದ್ದಾಳೆ. ಅಮೃತಾ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.















