ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ನೀಡಿ ಆದೇಶಿಸಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಉಗ್ರರನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಇಬ್ಬರು ಉಗ್ರರನ್ನು ಎನ್ಐಎ ಅಧಿಕಾರಿಗಳು ಮಂಡಿವಾಳದ ಎಫ್ಎಸ್ಎಲ್ ಸೆಂಟರ್ ಬಳಿಯಿರುವ ಇಂಟ್ರಾಗೇಷನ್ ಸೆಲ್ನಲ್ಲಿ ವಿಚಾರಣೆ ನಡೆಸಿದರು. ಬಳಿಕ ಬೆಳಿಗ್ಗೆ 10:30 ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಉಗ್ರರನ್ನು ಹಾಜರುಪಡಿಸಿದರು. ನ್ಯಾಯಾಧೀಶರು 10 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಮತೀನ್ ನಿವೃತ್ತ ಯೋಧನ ಮಗ.ತಂದೆ ಮನ್ಸೂರ 22 ವರ್ಷ
ದೇಶಕ್ಕಾಗಿ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಇದೀಗ ಅವರು ನಿಧನರಾಗಿದ್ದಾರೆ. ಆದರೆ ನಿವೃತ್ತ ಯೋಧ ಮನ್ಸೂರ ಅವರ ಪುತ್ರ ಅಬ್ದುಲ್ ಮತೀನ್ ತಾಹೆ ಉಗ್ರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾನೆ. ಸದ್ಯ ಎನ್ಐಎ ಅಧಿಕಾರಿಗಳು ಉಗ್ರ ಮತೀನ್ನನ್ನು ಬಂಧಿಸಿದ್ದಾರೆ.
ಕಳೆದ 12 ದಿನಗಳಿಂದ ಕಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಉಗ್ರರು, ಕೊಲ್ಕತ್ತಾದ ಮಿಧಿನಾಪುರದ ಹಲವು ಲಾಡ್ಜ್ ನಲ್ಲಿ ತಂಗಿದ್ದರು. ಪ್ರತಿ 2-3 ದಿನಗಳಿಗೊಮ್ಮೆ ವಾಸ್ತ್ಯವ್ಯ ಬದಲಿಸುತ್ತಿದ್ದರು. ಉಗ್ರರು ಸಂಜಯ್ ಅಗರಲ್ ವಾಲ್, ಉದಯ್ ದಾಸ್, ಯಶು ಪಟೇಲ್, ವಿಘೇಶ ಅಂತ ಹೆಸರು ಬದಲಾಯಿಸಿಕೊಳ್ಳುತ್ತಿದ್ದರು. ಉಗ್ರರು ಕಲ್ಕತ್ತಾದ ಹೊಟೇಲ್ ಪ್ಯಾರಡೈಸ್, ಲೇನಿನ್ ಸೇರಾನಿ ಸೇರಿ ಹಲವು ಹೊಟೇಲ್ಗಳಲ್ಲಿ ತಂಗಿದ್ದರು.









