Coastal Bulletin

ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ.

ಸಚಿವ ಬಿ.ಸಿ ನಾಗೇಶ್ ಅವರು, ಮೇ.19ರಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. 

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ  2022 ರ ಪರೀಕ್ಷೆಗಳ ಫಲಿತಾಂಶಗಳನ್ನು ಮೇ.19ರಂದು ಪ್ರಕಟಿಸಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಮೇಲೆ, ವಿದ್ಯಾರ್ಥಿಗಳು ತಮ್ಮ ಫಲಿತಾಂಶ ವೀಕ್ಷಣೆಯ ಬಗ್ಗೆ ಕೆ ಎಸ್ ಇ ಇ ಬಿ ಬೋರ್ಡ್ ಅಧಿಕೃತ ಮಾಹಿತಿ ಲಭ್ಯವಾಗಲಿದೆ.

ಕರ್ನಾಟಕ ಎಸ್‌ಎಸ್‌ಎಲ್ಸಿ ಫಲಿತಾಂಶ 2022  ಮೇ.19ರಂದು ಬಿಡುಗಡೆ

ಆಗಲಿರುವಂತ ಫಲಿತಾಂಶವನ್ನು ವಿದ್ಯಾರ್ಥಿಗಳು, ಅಧಿಕೃತ ವೆಬ್ಸೈಟ್ karresults.nic.in ಮತ್ತು sslc.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಫಲಿತಾಂಶ ಘೋಷಣೆಯಾದ ಮೇಲೆ karresults.nic.in ಮತ್ತು sslc.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು.

ಆ ಪುಟದಲ್ಲಿ ತೋರಿಸುವಂತ ಎಸ್ ಎಸ್ ಎಲ್ ಸಿ ಫಲಿತಾಂಶ ವೀಕ್ಷಣೆಯ ಲಿಂಕ್ ಕ್ಲಿಕ್ ಮಾಡಬೇಕು.

ಆಗ ತೆರೆದುಕೊಳ್ಳುವಂತ ಮತ್ತೊಂದು ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆ ನಮೂದಿಸಿದಬೇಕು.

ಈ ಬಳಿಕ, ಫಲಿತಾಂಶ ವೀಕ್ಷಣೆಯ ಬಳಿಯಲ್ಲಿ , ನಿಮ್ಮ ಎಸ್ ಎಸ್ ಎಲ್ ಸಿ ಫಲಿತಾಂಶ ಸಿಗಲಿದೆ.

Leave a Comment