ಸಿಸಿಬಿ ಪೊಲೀಸರಿಂದ ಬಂಧನವಾಗಿರುವ ಚೈತ್ರಾ ಕುಂದಾಪುರ ಪರ ಬಿಜೆಪಿ ಬ್ಯಾಟಿಂಗ್.

Coastal Bulletin
ಸಿಸಿಬಿ ಪೊಲೀಸರಿಂದ ಬಂಧನವಾಗಿರುವ ಚೈತ್ರಾ ಕುಂದಾಪುರ ಪರ ಬಿಜೆಪಿ ಬ್ಯಾಟಿಂಗ್.

ಉಡುಪಿ: ಚೈತ್ರಾ ಕುಂದಾಪುರ ತಪ್ಪು ಮಾಡಿದ್ರೆ ಕಾನೂನು‌ ಕ್ರಮ ಕೈಗೊಳ್ಳಲಿ, ಅನಗತ್ಯವಾಗಿ‌ ಹಿಂದೂಪರ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬಿಜೆಪಿ ಎಂಎಲ್ಎ ಟಿಕೆಟ್ ಗಾಗಿ ಏಳು ಕೋಟಿ ಡೀಲ್ ಪ್ರಕರಣ  ಆರೋಪದಡಿ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರು ಸಿಸಿಬಿ‌ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಅವರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪದ ಮೇಲೆ ಈ ಬಂಧನವಾಗಿದೆ.

ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ

ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ  ಒಟ್ಟು 7 ಕೋಟಿ ರೂಪಾಯಿ ಹಣ ಪಡೆದಿದ್ದರು ಎಂಬ ಆರೋಪವಿದೆ. ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್​ ಸಿಗದ ಕಾರಣ ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದಾರೆ. ಆದರೆ ಚೈತ್ರಾ ಕುಂದಾಪುರ ಹಣ ನೀಡದೇ ವಂಚಿಸಿದ್ದಾರೆ ಎಂದು ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಚೈತ್ರಾಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Leave a Comment