ಬೆಂಗಳೂರು: ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ಮತದಾನ ನಡೆಯಲಿದೆ. ಮತದಾರ ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾನೆ. ಈ ಪೈಕಿ ಚನ್ನಪಟ್ಟಣ ಕ್ಷೇತ್ರ ವಿವಿಧ ಕಾರಣಗಳಿಂದ ಹೆಚ್ಚು ಸದ್ದು ಮಾಡಿದೆ.
ಚನ್ನಪಟ್ಟಣದಲ್ಲಿ ನಿಖಿಲ್ Vs ಯೋಗೇಶ್ವರ್
ಮೂರು ಕ್ಷೇತ್ರಗಳ ಪೈಕಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರ ಹೆಚ್ಚು ಸದ್ದು ಮಾಡುತ್ತಿದೆ. ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳಾದ ಬಿಜೆಪಿ-ಜೆಡಿಎಸ್ಗೆ ಚನ್ನಪಟ್ಟಣ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ನಿಂದ ಸಿಪಿ ಯೋಗೇಶ್ವರ್ ಹಾಗೂ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಶಿಗ್ಗಾಂವಿಯಲ್ಲಿ ಭರತ್ Vs ಯಾಸೀರ್ ಖಾನ್ ಪಠಾಣ್
ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ
ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣದಲ್ಲಿದರೆ, ಕಾಂಗ್ರೆಸ್‌ನಿಂದ ಯಾಸೀರ್ ಖಾನ್ ಪಠಾಣ್ ಸೇರಿ ಅಂತಿಮ ಕಣದಲ್ಲಿರುವ 8 ಅಭ್ಯರ್ಥಿಗಳಿದ್ದಾರೆ. ಇಲ್ಲೂ ಎರಡು ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ.
ಸಂಡೂರಿನಲ್ಲಿ ಅನ್ನಪೂರ್ಣ Vs ಬಂಗಾರು ಹನುಮಂತು
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಹಾಗೂ ಬಿಜೆಪಿಯ ಬಂಗಾರು ಹನುಮಂತು ನಡುವೆ ನೇರಾ ಹಣಾಹಣಿ ನಡೆದಿದೆ. ಒಟ್ಟಾರೆ 7 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.















