ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10:05ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಪ್ರಶಾಂತಿ ಕುಟೀರಂ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ತಾವರೆಕೆರೆ ಮೆಟ್ರೋ ನಿಲ್ದಾಣದಿಂದ ಐಐಎಂ ಬೆಂಗಳೂರು ನಿಲ್ದಾಣದವರೆಗೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ. ಈ ವೇಳೆ ಪಿಂಕ್ ಲೈನ್ ಲೋಕಾರ್ಪಣೆ ಸೇರಿದಂತೆ ₹15,600 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಎಸ್ಪಿಜಿ ಹಾಗೂ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿವೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಚಾರ ಮಾರ್ಗಗಳಲ್ಲೂ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಸಂಜೆ ಮೈಸೂರಿನಿಂದ ದೆಹಲಿಗೆ ವಾಪಸಾಗಲಿದ್ದಾರೆ.
ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಪಿಂಕ್ ಲೈನ್ ಉದ್ಘಾಟನೆಗೆ ಬಿಗಿ ಪೊಲೀಸ್ ಭದ್ರತೆ
ಕಾಳೇನ ಅಗ್ರಹಾರದಿಂದ ತಾವರೆಕರೆವರೆಗಿನ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಎಸ್ಪಿಜಿ (SPG) ಮಾರ್ಗಸೂಚಿಯಂತೆ ನಗರ
ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ 3 ಜಂಟಿ ಆಯುಕ್ತರು, 15 ಡಿಸಿಪಿ, 20 ಎಸಿಪಿ, 30 ಇನ್ಸ್ಪೆಕ್ಟರ್, 100ಕ್ಕೂ ಹೆಚ್ಚು ಪಿಎಸ್ಐ ಹಾಗೂ 1,000ಕ್ಕೂ ಹೆಚ್ಚು ಸಿವಿಲ್ ಪೊಲೀಸರನ್ನು ನಿಯೋಜಿಸಲಾಗಿದೆ. ಸಂಚರಿಸುವ ಮಾರ್ಗ, ಎತ್ತರದ ಕಟ್ಟಡಗಳು ಮತ್ತು ಅಪಾರ್ಟ್ಮೆಂಟ್ಗಳ ಮೇಲೆ ಸಿಸಿಟಿವಿ ಹಾಗೂ ವಿಶೇಷ ನಿಗಾ ವಹಿಸಲಾಗಿದೆ.









