Coastal Bulletin

ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಮಕರ ಸಂಕ್ರಾಂತಿಯೂ ಒಂದು. ಸೂರ್ಯನು ತನ್ನ ಪಥವನ್ನು ಬದಲಿಸುವ ಈ ದಿನ ಪ್ರತಿ ಬೀದಿಯಲ್ಲೂ ಎಳ್ಳು-ಬೆಲ್ಲ ಬೀರುತ್ತಾ ನಾನಾ ತರಹದ ಸಂಭ್ರಮ ಸಡಗರ ಎಲ್ಲ ಕಡೆಯೂ ಇರುತ್ತದೆ.

ಸೂರ್ಯ ದೇವನ ಹಬ್ಬವೆಂದು ಪರಿಗಣಿಸಲಾದ ಈ ಹಬ್ಬವನ್ನು ಪ್ರತಿವರ್ಷ ಜನವರಿ ೧೪ರಂದು ಆಚರಣೆ  ಮಾಡಲಾಗುತ್ತದೆ. ಈ ಹಬ್ಬವನ್ನು ವೈಜ್ಞಾನಿಕ ರೀತಿಯಲ್ಲಿ ನೋಡಿದಾಗ ಸಂಕ್ರಾಂತಿಯ ಸಮಯದಲ್ಲಿ ಚಳಿ ಹೆಚ್ಚು ಇರುತ್ತದೆ.  ಈ ಸಮಯದಲ್ಲಿ ಎಳ್ಳು ತಿನ್ನುವುದರಿಂದ  ದೇಹದ ಉಷ್ಣತೆ  ಹಾಗೂ ಚರ್ಮದ ಕಾಂತಿಯೂ ಹೆಚ್ಚುತ್ತದೆ. ಮಕರ ಸಂಕ್ರಾತಿ ಹಬ್ಬವನ್ನು‌ ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಆಚರಿಸುತ್ತಾರೆ.

ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು ಎಳ್ಳುಬೀರುವುದು. ಪ್ರತಿ ಮನೆಯಲ್ಲಿ ಎಳ್ಳನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ ಎಳ್ಳು ಬೀರುವುದು ಮತ್ತು ಸ್ನೇಹಿತರು-ಸಂಬಂಧಿಕರೊಂದಿಗೆ ಶುಭಾಶಯಗಳನ್ನು ಹಂಚಿಕೊಳ್ಳುವುದು ಸಾಮಾನ್ಯವಾಗಿ ಕಂಡುಬರುವ ಸಂಕ್ರಾಂತಿಯ ಸಂಪ್ರದಾಯಗಳು.
ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು,ಹಣ್ಣು,ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ

ಬೆಲ್ಲ,ಒಣ ಕೊಬ್ಬರಿ,ಹುರಿಗಡಲೆ,ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ  ಎಲ್ಲರಿಗೂ ಹಂಚಿ ಖುಷಿ ಪಡುತ್ತಾರೆ

ಜನಪದ ಗೀತೆಯಲ್ಲೂ ಸಂಕ್ರಾಂತಿಯ ಬಗ್ಗೆ ಹೇಳಿದೆ. ಶಿವ ಮತ್ತು ಪಾರ್ವತಿಯರು ಲೋಕ ಸಂಚಾರ ಪ್ರಾರಂಭಿಸುತ್ತಾರಂತೆ. ಈ ಸಂಕ್ರಮಣದ ಕಾಲದ ಗೋಧೂಳಿ ಲಗ್ನಕ್ಕಿಂತ ಹೆಚ್ಚು ಸಮಯ ಈ ಭೂಲೋಕದಲ್ಲಿರುತ್ತಾರೆ ಎಂದು ಪುರಾಣದಲ್ಲಿ ಇದೆ. ಈ ಪುಣ್ಯ ದಿನದಲ್ಲಿ ಹಲವಾರು ದೇವತೆಗಳಿಗೆ ಶಾಪ ವಿಮೋಚನೆ ಉಂಟಾಗಿದೆ.

ಪ್ರತಿ ವರ್ಷ ಜನವರಿ 14 ಅಥವಾ 15ರಂದು ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ ಹಾಗೂ ಆನಂತರ ಆತನ ಪಥವು ಉತ್ತರಾಭಿಮುಖವಾಗಿ ಚಲಿಸಲು ಪ್ರಾರಂಭವಾಗುತ್ತದೆ. ಈ ಸಮಯದಲ್ಲಿ ಬೆಳಕು ಹೆಚ್ಚು ಇರುತ್ತದೆ.

ನಾಡಿನ ಸಮಸ್ತ ಜನತೆಗೆ ಸಂಕ್ರಾತಿ ಹಬ್ಬದ ಶುಭಾಶಯಗಳು

Leave a Comment