ಕರುನಾಡಿನಲ್ಲಿ ನಮೋ ಮತ ಬೇಟೆ- ಮೈಸೂರಿನಲ್ಲಿ ಬೃಹತ್ ಸಮಾವೇಶ,ಮಂಗಳೂರಿನಲ್ಲಿ ಬೃಹತ್ ರೋಡ್ ಶೋ.

Coastal Bulletin
ಕರುನಾಡಿನಲ್ಲಿ ನಮೋ ಮತ ಬೇಟೆ- ಮೈಸೂರಿನಲ್ಲಿ ಬೃಹತ್ ಸಮಾವೇಶ,ಮಂಗಳೂರಿನಲ್ಲಿ ಬೃಹತ್ ರೋಡ್ ಶೋ.

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮೈಸೂರಿನಲ್ಲಿ ಬೃಹತ್ ಸಭೆ ಉದ್ದೇಶಿಸಿ ಮಾತನಾಡಿ ಎನ್ ಡಿಎ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು. ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ದೇಶದೆಲ್ಲೆಡೆ ಚುನಾವಣೆಗೆ ಎಟಿಎಂ ರೂಪದಲ್ಲಿ ಕರ್ನಾಟಕದ ಹಣವನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ ವಿರುದ್ದ ಟೀಕಾ ಪ್ರಹಾರವನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರಮೋದಿ ಅವರು ತುಕಡೆ ತುಕಡೆ ಗ್ಯಾಂಗ್‌ ನಂತೆ ಕಾಂಗ್ರೆಸ್‌ ಈಗಲೂ ಯೋಚಿಸುತ್ತಿದೆ. ದೇಶ ಕಟ್ಟುವ ಬದಲು ಒಡೆಯುವ ತನ್ನ ಎಂದಿನ ಶೈಲಿಯ ರಾಜಕಾರಣದಲ್ಲೇ ನಿರತವಾಗಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಭಾನುವಾರ ನಡೆದ ಮೈಸೂರು- ಕೊಡಗು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಲೋಕಸಭೆ ಚುನಾವಣೆಯ ಜೆಡಿಎಸ್‌ ಹಾಗೂ ಬಿಜೆಪಿ ಜಂಟಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಸಮಯವನ್ನು ಕಾಂಗ್ರೆಸ್‌ ಪಕ್ಷದ ನೀತಿಗಳು, ಆ ಪಕ್ಷದ ಈಗಿನ ನಡವಳಿಕೆ, ದೇಶದ ಕುರಿತು ಕಾಂಗ್ರೆಸ್‌ಗೆ ಇರುವ ನಿಲುವುಗಳ ಕುರಿತಾಗಿಯೇ ಇತ್ತು.

ಮೈಸೂರಿನಿಂದ ನೇರ ಮಂಗಳೂರಿಗೆ ಬಂದಿಳಿದ ಪ್ರಧಾನಿ ಮಂಗಳೂರು ಹಾಗೂ ಉಡುಪಿ- ಕ್ಷೇತ್ರದ ಅಭ್ಯರ್ಥಿಗಳ ಪರ ಮತಯಾಚನೆಯ ಸಲುವಾಗಿ ರೋಡ್ ಶೋ ನಡೆಸಿದರು.

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎ.26ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಚಾರದ ಭಾಗವಾಗಿ ರೋಡ್ ಶೋ ಮೂಲಕ ಮತ ಬೇಟೆಗೆ ಪ್ರಧಾನಿ

ಮೋದಿ ಅವರನ್ನು ಬಿಜೆಪಿಯ ನಾಯಕರು, ಕಾರ್ಯಕರ್ತರು, ಹರ್ಷೋದ್ಗಾರದೊಂದಿಗೆ ಸ್ವಾಗತಿಸಿದರು.

ರೋಡ್ ಶೋಗಾಗಿ ವ್ಯವಸ್ಥೆ ಮಾಡಲಾಗಿದ್ದ ವಿಶೇಷ ವಾಹನದಲ್ಲಿ ಪ್ರಧಾನಿ ಮೋದಿ ಜೊತೆ ದಕ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬ್ರಿಜೇಶ್ ಚೌಟ ಮತ್ತು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತ್ರ ಅವಕಾಶ ನೀಡಲಾಗಿತ್ತು.

Leave a Comment