Coastal Bulletin

ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಮಂಗಳವಾರದವರೆಗೆ ಮಳೆಯಾಗಲಿದೆ. ಕಳೆದ 2 ವಾರಗಳಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ 2 ದಿನಗಳಿಂದ ಚಳಿಯ ವಾತಾವರಣ ಹೆಚ್ಚಾಗಿದೆ. ಇಂದು ಕೂಡ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಇನ್ನೂ 4 ದಿನ ಚದುರಿದ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು,

ಬಿರಿಗಾಳಿಯೂ ಬೀಸಲಿದೆ. ಹಾಗೇ, ಈ ಬಾರಿ ಜೂನ್ ಮಧ್ಯದ ವೇಳೆಗೆ ಕರ್ನಾಟಕದಲ್ಲೂ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ.

ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಒಳನಾಡು ಮತ್ತು ಕರಾವಳಿಯಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಆಗಾಗ ಗುಡುಗು ಸಹಿತ ಮಳೆಯೂ ಸುರಿಯಲಿದೆ. ಬೆಂಗಳೂರಿನಲ್ಲಿ ಕಳೆದ 50 ವರ್ಷಗಳಲ್ಲಿ ಅತಿ ಹೆಚ್ಚು ತಂಪಾದ ತಾಪಮಾನವಿರುವ 2ನೇ ವರ್ಷ ಇದಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಿಸಿಲು ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ.

Leave a Comment