ಕೋಲಾರ : ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ರಾಮಸಾಗರ ಗ್ರಾಮ ಪಂಚಾಯತಿ ಸಿಬ್ಬಂದಿಯ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಕೆಲಸ ಮಾಡುವ ಸ್ಥಳ ದೇವಸ್ಥಾನದಂತೆ ಎಂಬ ನಂಬಿಕೆಯಿದ್ದರೂ ಇಲ್ಲಿನ ಸಿಬ್ಬಂದಿ ಮಾತ್ರ ತಾವು ಕೆಲಸ ಮಾಡುವ ಗ್ರಾಮ ಪಂಚಾಯತಿಯನ್ನು ಕಾಮಚೇಷ್ಟೆ ಕುಟೀರ ಮಾಡಿಕೊಂಡಿದ್ದಾರೆ. ಪಂಚಾಯಿತಿ ಕಾರ್ಯಾಲಯದಲ್ಲಿಯೇ ಖುಲ್ಲಂ ಖುಲ್ಲಾ ಕಿಸ್ ಮಾಡುತ್ತಾ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಈಗ ಈ ಫೋಟೋಗಳು ವೈರಲ್ ಆಗಿದ್ದು, ಮಹಿಳೆಯಿಂದ ಲೈಂಗಿಕ ಕಿರುಕುಳದ ಕೇಸ್ ದಾಖಲಾಗಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ರಾಮಸಾಗರ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ಮಹಿಳಾ ಉದ್ಯೋಗಿ ಜೊತೆಗಿರುವ ಖಾಸಗಿ ಫೋಟೋಗಳು ವೈರಲ್ ಆಗಿದ್ದು, ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಫೋಟೋಗಳು ಸಾಮಾಜಿಕ ಜಾಲ
ತಾಣಗಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಮಹಿಳಾ ಸಿಬ್ಬಂದಿ ನನ್ನ ಮೇಲೆ ದೌರ್ಜನ್ಯವೆಸಗಲಾಗುತ್ತಿದೆ ಎಂದು ದೂರು ನೀಡಿದ್ದಾರೆ. ಮತ್ತೊಂದೆಡೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣಗೆ ಎಚ್ಚರಿಕೆ ನೀಡಿದ್ದಾರೆ.









