Coastal Bulletin

ಬೆಂಗಳೂರು : ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಡೆಸಲಾದ ಸಿಇಟಿ ಪರೀಕ್ಷೆ ಫಲಿತಾಂಶ ಇಂದು ಬೆಳಗ್ಗೆ 9:30ಕ್ಕೆ ಪ್ರಕಟಿಸಲಾಗುವುದು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಫಲಿತಾಂಶ ಪ್ರಕಟಿಸಲಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾದ ಸಿಇಟಿ ಪರೀಕ್ಷೆ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತದೆ.

ಬಳಿಕ ಕೌನ್ಸೆಲಿಂಗ್ ದಿನಾಂಕ ತಿಳಿಸಲಾಗುವುದು.

ಮೇ ತಿಂಗಳಲ್ಲಿ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ

ಸಿಇಟಿ ನಡೆಸಲಾಗಿತ್ತು. ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಸಿಇಟಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಆಧರಿಸಿ ರ್ಯಾಂಕ್ ಪಟ್ಟಿ ಸಿದ್ದಪಡಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆ ನಂತರ http://kea.kar.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

Leave a Comment