ಚಿಕ್ಕಮಗಳೂರು: ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಆತ್ಮಹತ್ಯೆಗೆ ಶರಣು

Coastal Bulletin
ಚಿಕ್ಕಮಗಳೂರು: ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗೇಶ್ (29) ಮೃತ ಯುವಕ. ಕುದುರೆಮುಖ (Kudremukh) ಠಾಣೆಯ ಪೊಲೀಸ್ ಪೇದೆ ಸಿದ್ದೇಶ್ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕ ನಾಗೇಶನಿಗೆ ಮನಸೋ ಇಚ್ಛೆ ಹೊಡೆದಿದ್ದನು. ಅಲ್ಲದೇ, ನಾಗೇಶ್ ವಿರುದ್ಧ ಸುಳ್ಳು ಎಫ್ಐಆರ್ ಕೂಡ ದಾಖಲಿಸಿದ್ದರು. ಜೊತೆಗೆ ಆತನ ಜೀಪ್ ಸಹ ಪೊಲೀಸರು ಸೀಜ್ ಮಾಡಿದ್ದರು. ಇದರಿಂದ ಮನನೊಂದು ನಾಗೇಶ್ ನಿನ್ನೆ (ಆ.13) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಾಗೇಶ್ ಕಳಸ ತಾಲೂಕಿನ ಬಸ್ತಿಗದ್ದೆ ನಿವಾಸಿಯಾಗಿದ್ದು, ಕಳಸ‌ ಸಮೀಪದ ಎಸ್ಟೇಟ್ನಲ್ಲಿ ಜೀಪ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಜುಲೈ 17 ರ ರಾತ್ರಿ ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್ ನಡುರಸ್ತೆಯಲ್ಲಿ ಎಣ್ಣೆ ಪಾರ್ಟಿ ಮಾಡುತ್ತಿದ್ದನು. ಈ ವೇಳೆ ಜೀಪಿನಲ್ಲಿ ಬಂದ ನಾಗೇಶ್, ಪಕ್ಕಕ್ಕೆ ಸರಿಯುವಂತೆ ಹೇಳಿದ್ದಾರೆ. ಇಷ್ಟಕ್ಕೆನೇ, ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್ ಯುವಕ ನಾಗೇಶ್ ನ ಮೇಲೆ ಹಲ್ಲೆ ಮಾಡಿದ್ದಾನೆ. ಅಲ್ಲದೇ, ಕರ್ತವ್ಯಕ್ಕೆ ಅಡ್ಡಿ, ಹಲ್ಲೆಗೆ ಯತ್ನಿಸಿದನೆಂದು ಎಂದು ಸುಳ್ಳು ಎಫ್ಐಆರ್ ದಾಖಲಿಸಿದ್ದರು.

ಕುದುರೆಮುಖ ಠಾಣೆಯ ಪೊಲೀಸ್

ಪೇದೆ ಸಿದ್ದೇಶ್ನ ದೌರ್ಜನ್ಯದ ಬಗ್ಗೆ ಯುವಕ ನಾಗೇಶ್ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ ಕೊಪ್ಪ DYSP ನೇತೃತ್ವದಲ್ಲಿ ತಂಡ ರಚಿಸಿದ್ದರು. ಅತ್ತ ತನಿಖೆ ನಡೆಯುತ್ತಿದ್ದು, ಇತ್ತ ನಾಗೇಶ್ ಬುಧಾವಾರ (ಆ.13) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ ಪೊಲೀಸ್ ಪೇದೆ ಸಿದ್ದೇಶ್ ನನ್ನು ಅಮಾನತು ಮಾಡಿದ್ದಾರೆ. ಆದರೆ, ಕುದುರೆಮುಖ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

Leave a Comment