Coastal Bulletin

ಕೋಲಾರ: ನಿನ್ನೆ ರಾತ್ರಿ ನಗರದ ಎಂಬಿ ರಸ್ತೆಯ ವಿಶಾಲ್ ಮಾರ್ಟ್ ಎದುರು ಚಿಕ್ಕಮಗಳೂರಿನ ದತ್ತಪೀಠಕ್ಕೆ ತೆರಳುತ್ತಿದ್ದ ಮಿನಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಾಟದಿಂದ ಹಿಂಭಾಗದ ಗಾಜು ಪುಡಿ ಪುಡಿ ಯಾಗಿದೆ.ಬಸ್​ ಒಳಗೆ ಮುಂಭಾಗ ಕುಳಿತಿದ್ದ ಇಬ್ಬರಿಗೆ ಗಾಯಗಳಾಗಿವೆ. ಕೃತ್ಯ ಖಂಡಿಸಿ ಹಿಂದೂ ಪರ ಸಂಘಟನೆಗಳು ತಡರಾತ್ರಿ ಪ್ರತಿಭಟನೆ ನಡೆಸಿದವು.

ಕೋಲಾರ ನಗರ ಠಾಣೆ ಎದುರು ನೂರಾರು ಯುವಕರು, ದತ್ತ ಮಾಲಾಧಾರಿಗಳು ಪ್ರತಿಭಟನೆ ನಡೆಸಿದರು. ಬಸ್ ಮೇಲೆ ಕಲ್ಲು ತೂರಾಟ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಪಟ್ಟು ಹಿಡಿದರು. ಸ್ಥಳಕ್ಕೆ DYSP ಗಿರಿ ಅವರು ಭೇಟಿ, ಹಿಂದೂಪರ ಸಂಘಟನೆಗಳ ಮುಖಂಡರ ಜೊತೆಗೆ ಮಾತುಕತೆ ನಡೆಸಿದರು.

ಕೋಲಾರದಲ್ಲಿ ನಡೆದ ಘಟನೆ ಸಂಬಂಧ ಚಿಕ್ಕಮಗಳೂರಿನಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ಮುಸ್ಲಿಂ ಕಿಡಿಗೇಡಿಗಳಿಂದ ಕೃತ್ಯ ನಡೆದಿದೆ. ಭಜನೆ ಮಾಡಿಕೊಂಡು ಬರುವಾಗ ಮಾರಣಾಂತಿಕ ಹಲ್ಲೆ

ಮಾಡಿದ್ದಾರೆ ಎಂದು ಆರೋಪಿಸಿದರು. ಮುಸ್ಲಿಂ ಕಿಡಿಗೇಡಿಗಳನ್ನ ಕೂಡಲೇ ಬಂಧಿಸಬೇಕು. ಇನ್ಮೇಲೆ ದಾದಾಗಿರಿ, ತಾಲಿಬಾನೀಕರಣ ಇಲ್ಲಿ ನಡೆಯೋದಿಲ್ಲ. ಹಲ್ಲೆ ಪ್ರವೃತ್ತಿ ನಿಲ್ಲಿಸದಿದ್ರೆ ಒದಿತ್ತೀವಿ ಅಂತ ಎಚ್ಚರಿಕೆ ಕೊಡ್ತಾ ಇದ್ದೀವಿ ಎಂದರು. ಡಿಸಿ ಅವ್ರಿಗೆ ಹೇಳ್ತೀನಿ ಕೂಡಲೇ ಹದ್ದು ಬಸ್ತಿನಲ್ಲಿಡಬೇಕು. ಅಭಿಯಾನಕ್ಕೆ ಸೂಕ್ಷ್ಮ ಪ್ರದೇಶದಲ್ಲಿ ರಕ್ಷಣೆ ಯಾಕೆ ಕೊಡಲಿಲ್ಲ. ಮುಖ್ಯಮಂತ್ರಿ, ಗೃಹಸಚಿವರಿಗೆ ಹೇಳ್ತಾ ಇದ್ದೀನಿ ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು. ಬಂಧಿಸದಿದ್ರೆ ನಾನೇ ನಾಳೆ ಕೋಲಾರಕ್ಕೆ ಹೋಗುವುದಕ್ಕೆ ನಿಶ್ಚಿತ ಮಾಡಿದ್ದೇನೆ‌ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

Leave a Comment