Coastal Bulletin

ಕಳೆದೆರಡು ತಿಂಗಳಿನಿಂದ ಚರ್ಚೆಯಲ್ಲಿದ್ದ ಹಿಜಾಬ್‌ ವಿವಾದಕ್ಕೆ ಇಂದು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.

ಶಾಲೆ ಕಾಲೇಜುಗಳಲ್ಲಿ ಆಯಾ ಕಾಲೇಜು ನಿರ್ಧರಿಸಿದ ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು ಎಂದು ಹೈಕೋರ್ಟ್ ತೀರ್ಪು ನೀಡಿದೆ.

ಹಿಜಾಬ್ ಗೆ ಅವಕಾಶ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿ, ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗವಲ್ಲ. ಅಲ್ಲದೇ ಸರ್ಕಾರದ ವಸ್ತ್ರ ಸಂಹಿತೆಯನ್ನು ಯಾರೂ ಪ್ರಶ್ನೆ

ಮಾಡುವ ಹಾಗಿಲ್ಲ‌ ಎಂದಿದೆ.

ಹಿಜಾಬ್‌ ಹಾಗೂ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.  ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ತೀರ್ಪು ಪ್ರಕಟಿಸಿದ್ದಾರೆ.

Leave a Comment