Coastal Bulletin

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ವಿಷಯವಾಗಿ ಕೆ.ಎಸ್. ಈಶ್ವರಪ್ಪ ಇಂದು ಸಂಜೆ ರಾಜೀನಾಮೆ ನೀಡಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣ ಸಂಬಂಧವಾಗಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇಂದು ಸಂಜೆ ರಾಜೀನಾಮೆ

ನೀಡಲು ನಿರ್ಧರಿಸಿದ್ದಾರೆ. ಅಲ್ಲದೇ ಅವರ ರಾಜೀನಾಮೆಗೆ ಬಿಜೆಪಿ ಹೈಕಮಾಂಡ್ ಯಾವುದೇ ಒತ್ತಡವನ್ನು ಹೇರಿಲ್ಲ. ಅವರೇ ಸ್ವಇಚ್ಛೆಯಿಂದ ತಮ್ಮ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿಲಿದ್ದಾರೆ  ಎಂದರು.

Leave a Comment