ರಾಜಧಾನಿಗೆ 'ಗ್ರೇಟರ್ ಬೆಂಗಳೂರು' ಆಡಳಿತ: ಇತಿಹಾಸದ ಪುಟ ಸೇರಿದ ಬಿಬಿಎಂಪಿ

Coastal Bulletin
ರಾಜಧಾನಿಗೆ 'ಗ್ರೇಟರ್ ಬೆಂಗಳೂರು' ಆಡಳಿತ: ಇತಿಹಾಸದ ಪುಟ ಸೇರಿದ ಬಿಬಿಎಂಪಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇನ್ನು ಮುಂದೆ ಬೆಂಗಳೂರು–ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

GBAನಲ್ಲಿ ಏನೆಲ್ಲಾ ಬದಲಾಗಲಿದೆ?

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಮುಖ್ಯಮಂತ್ರಿಗಳೇ ಅಧ್ಯಕ್ಷರು

ಬೆಂಗಳೂರು ಅಭಿವೃದ್ಧಿ ಸಚಿವರೇ GBAನ ಉಪಾಧ್ಯಕ್ಷ

ತಲಾ 125 ವಾರ್ಡ್‌ಗಳನ್ನು ಒಳಗೊಂಡ ಮೂರು ನಗರ ಪಾಲಿಕೆ

ಪ್ರತಿ ಪಾಲಿಕೆಗೂ ಗ್ರೇಟರ್ ಬೆಂಗಳೂರು ಪ್ರದೇಶದ ಗಡಿ ನಿಗಧಿ ಮಾಡಲಾಗುತ್ತೆ

ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಜಿಗಣಿ ಕೈಗಾರಿಕೆ

ಪ್ರದೇಶ ಬೊಮ್ಮಸಂದ್ರ

ಸರ್ಜಾಪುರ, ಬಾಗಲೂರು, ರಾಜಾನುಕುಂಟೆ, ಹೆಸರಘಟ್ಟ, ದಾಸನಪುರ ಸೇರ್ಪಡೆ

ಮಾಕಳಿ, ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯೂ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ

ಗ್ರೇಟರ್ ಬೆಂಗಳೂರು ಕಟ್ಟಡಗಳ ಗಾತ್ರ, ಎತ್ತರ ನಿಯಮಗಳು ಬದಲು ಸಾಧ್ಯತೆ

ವಸತಿ ಕಟ್ಟಡಗಳಿಗೆ ಶೇ. 50ರಷ್ಟು & ವಾಣಿಜ್ಯ ಕಟ್ಟಡಗಳಿಗೆ ಶೇ. 25ರಷ್ಟು ಕಡಿತ ತರುವ ಸಾಧ್ಯತೆ

Leave a Comment