75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ನಿರ್ಮಲ ಆಸ್ಪತ್ರೆ ಹಾಗೂ ಭಗವಾನ್ ಮಹಾವೀರ್ ದರ್ಶನ್ ಕಣ್ಣಿನ ಆಸ್ಪತ್ರೆ ಇವರ ಸಹಯೋಗದೊಂದಿಗೆ ಸರ್ದಾರ್ ವಲ್ಲಭಬಾಯಿ ಪಟೇಲ್ ನಗರದಲ್ಲಿ ಬಡಾವಣೆಯ ನಿವಾಸಿಗಳಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಅಶೋಕ್ ರವರು ಮಾತನಾಡಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಅರ್ಥಪೂರ್ಣವಾಗಿ ಸಾರ್ವಜನಿಕರಿಗೆ ಹಾಗೂ ಬಡವರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಮತ್ತು ಅವರ ಆರೋಗ್ಯ ವೃದ್ಧಿಸಿಕೊಳ್ಳಲು ಅರ್ಥಪೂರ್ಣವಾಗಿ ಇವತ್ತಿನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ ಇಂತಹ ಜನಪರ ಕಾರ್ಯಕ್ರಮಗಳು ಜನ ಸೇವಾ ಚಟುವಟಿಕೆಗಳು
ಮಾಡದಿದ್ದರೆ ಜನರಿಗೆ ಅನುಕೂಲವಾಗುತ್ತದೆ ಮತ್ತು ಅದರ ಮಹತ್ವವನ್ನು ತಿಳಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು
ಈ ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮುಖಂಡರು ಡಿ ಲೋಹಿತ್ ಮತ್ತು ಸಮಾಜ ಸೇವಕರಾದ ಪುಟ್ಟಸ್ವಾಮಿ ನಿವೃತ್ತ ಪೊಲೀಸ್ ಅಧಿಕಾರಿಗಳಾದ ದೊರೆಸ್ವಾಮಿ ಸತ್ಯನಾರಾಯಣ್ ದೇವಪ್ಪಾ ಜಿ ಜಯರಾಮ ಮಲ್ಲಿಕಾರ್ಜುನ ಹಾಗೂ ವೈದ್ಯರಾದ ದರ್ಶನ್ ಮತ್ತು ನವೀನ ಮುಂತಾದವರು ಉಪಸ್ಥಿತರಿದ್ದರು















