ಶಿವಮೊಗ್ಗ: ಶಿಮವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಹಾಗೂ ವೀರ ಸಾವರ್ಕರ್ ಪೋಟೋ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇದರ ಮಧ್ಯೆಯೇ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಓರ್ವ ಯುವಕನಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಬಜಾರ್ ನಲ್ಲಿದ್ದ ಪ್ರೇಮ್ ಸಿಂಗ್ ಎಂಬ 20 ವರ್ಷದ ಯುವಕನಿಗೆ ಬಜಾರ್ ನಿಂದ ಇರಿಯಲಾಗಿದ್ದು, ಆತನನ್ನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೀರ ಸಾವರ್ಕರ್ ಹಾಗೂ ಟಿಪ್ಪು ಫ್ಲೆಕ್ಸ್ ವಿಚಾರದಲ್ಲಿ 10 ಜನರನ್ನ ವಶಕ್ಕೆ ಪಡೆಯಲಾಗಿದೆ. ಗಲಾಟೆ ಹಿನ್ನೆಲೆಯಲ್ಲಿ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಗಿಳಿದಿವೆ. ಈ ವೇಳೆ ಪೊಲೀಸರೊಡನೆ ವಾಗ್ವಾದ ನಡೆಸಿದ್ದಾರೆ.
ಉಪ್ಪಾರಕೇರಿ ಬಡಾವಣೆಯಲ್ಲಿ ಪ್ರೇಮ್ ಸಿಂಗ್ ಎಂಬುವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ರೆ, ಮತ್ತೊಂದೆಡೆ ಗಾಂಧಿ ಬಜಾರ್‌ನಲ್ಲಿ ಅಂಗಡಿ ಬಾಗಿಲು ಮುಚ್ಚಿ ಮನೆಗೆ ತೆರಳುತ್ತಿದ್ದಾಗ ಪ್ರವೀಣ್ ಎನ್ನುವಾತನಿಗೆ
ದುಷ್ಕರ್ಮಿಗಳು ಏಕಾಏಕಿ ಚೂರಿ ಇರಿದಿದ್ದಾರೆ. ಇಬ್ಬರು ಗಾಯಾಳಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯದಲ್ಲಿ ಪದೇ ಪದೇ ಬಹುಸಂಖ್ಯಾತರ ಮೇಲೆ ಹಲ್ಲೆ,ಕೊಲೆ,ಕೊಲೆಯತ್ನಗಳು ಹೆಚ್ಚಾಗುತ್ತಿದ್ದು ಸರಕಾರದ ವೈಫಲ್ಯ ಎದ್ದು ಕಾಣುತ್ತಿದ್ದು ಸರಕಾರವು ಇಂತವರ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳದಿರುವುದರಿಂದಲೇ ಎಂದು ಸಾಮಾಜಿಕವಾಗಿ ಅಭಿಪ್ರಾಯ ಕೇಳಿಬರುತ್ತಿದೆ.















