ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಪರಿಷತ್ತಿನಲ್ಲಿ ಮಂಡನೆಯನ್ನು ಮಾಡಿ ಅಂಗೀಕಾರವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮೇ 12, 2022 ರಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಸಮ್ಮತಿಸಲು ಅನುಮೋದನೆ ನೀಡಿತ್ತು. ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಅಂಗೀಕಾರವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು
ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆಯನ್ನು ನೀಡಿದ್ದರು. ಆದರೂ ಸದನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಿ ಅಂಗೀಕಾರ ಪಡೆಯಲು ಸರ್ಕಾರ ತೀರ್ಮಾನಿಸಿತ್ತು. ಅದರಂತೆ ವಿಧಾನ ಪರಿಷತ್ತಿನಲ್ಲಿ ಮತಾಂತರ ನಿಷೇಧ ಕಾಯ್ದೆ ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆಯು ಅಂಗೀಕಾರವಾಗಿದೆ
ಮತಾಂತರ ನಿಷೇಧ ಕಾಯ್ದೆ ಏನು ಹೇಳುತ್ತೆ?
*ಬಲವಂತ, ವಂಚನೆ, ಒತ್ತಾಯ,ಆಮಿಷದ ಮದುವೆಗೆ ನಿಷೇಧ
*ಬಲವಂತದ ಮತಾಂತರಕ್ಕೆ 3 ರಿಂದ 5 ವರ್ಷ ಜೈಲು,25 ಸಾವಿರ ದಂಡ
*ಅಪ್ರಾಪ್ತರು,ದಲಿತರ ಮತಾಂತರಕ್ಕೆ 3 ರಿಂದ 10 ವರ್ಷ ಶಿಕ್ಷೆ,50 ಸಾವಿರ ದಂಡ
*ಮತಾಂತರಕ್ಕೆ ಬಲಿಯಾದವರಿಗೆ ಆಪಾದಿತನಿಂದ 5 ಲಕ್ಷ ಪರಿಹಾರ
*ಅಪರಾಧ ಪುನರಾವರ್ತನೆ ಆದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ದಂಡ
*ಮತಾಂತರದ ಉದ್ದೇಶದಿಂದ ಆದ ವಿವಾಹ ಅನೂರ್ಜಿತ
*ಮತಾಂತರ ಅಪರಾಧ ಜಾಮೀನು ರಹಿತವಾಗಿರಲಿದೆ
* ಮತಾಂತರಕ್ಕೂ ಅವಕಾಶವಿದೆ,30 ದಿನ ಮೊದಲೇ ಡಿಸಿಗೆ
ತಿಳಿಸಬೇಕು
* ಮತಾಂತರಗೊಂಡ ವ್ಯಕ್ತಿ 20 ದಿನದೊಳಗೆ ಡಿಸಿ ಮುಂದೆ ಹಾಜರಾಗಬೇಕು
ಮತಾಂತರಕ್ಕಿರುವ ನಿಯಮಗಳೇನು?
*ಮತಾಂತರವಾಗಲು ಮುಂದಾಗಿರುವ ವ್ಯಕ್ತಿ ಕನಿಷ್ಠ ಅರವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು.
*ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆ ಮಾಹಿತಿ ಕೊಡಬೇಕು.
* ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ30 ದಿನಗಳ ಒಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.
*ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಕ್ರಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.
*ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.
*ಅಪರಾಧಕ್ಕೆ ನೆರವು ಹಾಗೂ ಪ್ರೇರಣೆ ನೀಡಿದ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ.
*ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಮಾಹಿತಿ ಕೊಡಬೇಕು.
*ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಜಿಲ್ಲಾ ದಂಡಾಧಿಕಾರಿ ಕ್ರಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.














